ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾನುವಾರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಮರೆಯದಿರಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಜನವರಿ 16 : ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಈ ಹಿಂದೆ ಎಷ್ಟು ಬಾರಿ ಲಸಿಕೆ ಹಾಕಿಸಿದ್ದರೂ, ಈ ಬಾರಿಯೂ ಮತ್ತೆ ಪೋಲಿಯೋ ಹನಿ ಹಾಕಿಸಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.

ವಿಶ್ವಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ದಕ್ಷಿಣ ರಾಜ್ಯಗಳ ಶೃಂಗಸಭೆಯಲ್ಲಿ ರಾಜ್ಯ ಸರ್ಕಾರ ಸಾಧನೆಗೆ ಪ್ರಶಂಸನಾ ಪತ್ರವೂ ಸಿಕ್ಕಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣ ಕಂಡುಬಂದಿರುವುದರಿಂದ ಮುಂಜಾಗೃತ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ.

pulse polio

ಎರಡು ಹಂತದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಜನವರಿ 17ರ ಭಾನುವಾರ ಮೊದಲ ಹಂತ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ 74.25 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜನವರಿ 17 ರಂದು ತಮ್ಮ ಮನೆಯ ಹತ್ತಿರವಿರುವ ಬೂತ್‍ಗಳಲ್ಲಿ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಮನವಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ 1,996 ಬೂತ್‍ಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ.

ಜನವರಿ 17ರಂದು ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಜನವರಿ 18, 19, 20 ರಂದು ಬೂತ್‍ಗಳಲ್ಲಿ ಲಸಿಕೆ ಹಾಕಿಸದೆ ಬಿಟ್ಟುಹೋದ ಮಕ್ಕಳ ಮನೆಮನೆಗೆ ತೆರಳಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಫೆ. 21 ರಂದು ಎರಡನೇ ಸುತ್ತಿನ ಲಸಿಕೆ ಕಾರ್ಯಕ್ರಮ ನಡೆಯಲಿದೆ.

ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಳ್ಳಿ, ಪಟ್ಟಣ, ನಗರ ಸಹಿತ ಒಟ್ಟು 3,2617 ಬೂತ್‌‌ಗಳಲ್ಲಿ 1,03,464 ಕಾರ್ಯಕರ್ತರು ಲಸಿಕೆ ಹಾಕಲಿದ್ದಾರೆ. ಇದಕ್ಕಾಗಿ 51,732 ತಂಡಗಳು, 1,205 ಸಂಚಾರಿ ತಂಡಗಳು, 1,736 ಟ್ರಾನ್ಸಿಟ್ ತಂಡಗಳು ಮತ್ತು 6,522 ಮೇಲ್ವಿಚಾರರನ್ನು ನೇಮಿಸಲಾಗಿದೆ.

English summary
Karnataka government organizes Pulse Polio Immunization programme on January 17, Sunday. Volunteers will administer polio drops at booths on January 17. They will visit households for the three two days (January 18, 19 and 20 ) said U.T.Khader minister for Health and Family Welfare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X