'ಜೇಮ್ಸ್' ಸಿನಿಮಾ ಚಿತ್ರಮಂದಿರಗಳಿಂದ ತೆಗೆಯಕೂಡದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮಾರ್ಚ್ 23: ನಟ ಪುನೀತ್ ರಾಜ್‌ಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾವನ್ನು ಅನಾವಶ್ಯಕವಾಗಿ ಚಿತ್ರಮಂದಿರಗಳಿಂದ ತೆಗೆಯಕೂಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಪ್ರದಯೇಶಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ಬುಧವಾರ ಅವರು ಪ್ರತಿಕ್ರಿಯೆ ನೀಡಿದರು.

'ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ. ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ' ಎಂದು ಹೇಳಿದರು.
''ಜೇಮ್ಸ್ ಚಿತ್ರಪ್ರದರ್ಶನದಲ್ಲಿ ಆಗಿರುವ ಗೊಂದಲಗಳ ಬಗ್ಗೆ ನಟ ಶಿವರಾಜ್ ಕುಮಾರ್ ಅವರ ಬಳಿಯೂ ಮಾತನಾಡಿದ್ದೇನೆ. ತೊಂದರೆ ಇದ್ದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಥವಾ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದ್ದೇನೆ. ಅವರೂ ಸಹ ಒಪ್ಪಿದ್ದಾರೆ. ಕಾಂಗ್ರೆಸ್ ನವರು ಸಿನಿಮಾದಲ್ಲಿಯೂ ರಾಜಕಾರಣ ಮಾಡುವಷ್ಟು ಕೆಳಮಟ್ಟಕ್ಕೆ ಹೋಗಿದ್ದಾರೆ" ಎಂದು ಟೀಕಿಸಿದರು.












Click it and Unblock the Notifications