• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Puneeth Satellite : ಶ್ರೀಹರಿಕೋಟಾದಿಂದ ಪುನೀತ್ ರಾಜಕುಮಾರ್ ಉಪಗ್ರಹಣ ಉಡಾವಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 25: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು,'' ಎಂದು ತಿಳಿಸಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.

ಬಾಹ್ಯಾಕಾಶದಿಂದ ಭೂಮಿಗೆ ಅಪ್ಪಳಿಸುತ್ತಿವೆ ಮನುಷ್ಯ ಸೃಷ್ಟಿತ ಕಸಬಾಹ್ಯಾಕಾಶದಿಂದ ಭೂಮಿಗೆ ಅಪ್ಪಳಿಸುತ್ತಿವೆ ಮನುಷ್ಯ ಸೃಷ್ಟಿತ ಕಸ

ಎಲ್ಲಾ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ

ಎಲ್ಲಾ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ

ಈ ಸ್ಪರ್ಧೆ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ ಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

ಒಟ್ಟು 75 ಉಪಗ್ರಹ ಅಭಿವೃದ್ಧಿಪಡಿಸುವ ಯೋಜನೆ

ಒಟ್ಟು 75 ಉಪಗ್ರಹ ಅಭಿವೃದ್ಧಿಪಡಿಸುವ ಯೋಜನೆ

ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಅನ್ನು ಘೋಷಿಸಿದ್ದರು. ಈ ಪೈಕಿ ಬೆಂಗಳೂರು ವಲಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು 'ಕೆಜಿಎಸ್3ಸ್ಯಾಟ್' ಉಪಗ್ರಹವನ್ನು 1.90 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಉಪಗ್ರಹಕ್ಕೆ ಪುನೀತ್ ಹೆಸರು

ವಿದ್ಯಾರ್ಥಿಗಳ ಉಪಗ್ರಹಕ್ಕೆ ಪುನೀತ್ ಹೆಸರು

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ರಾಜಕುಮಾರ್ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನು ಇಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ," ಎಂದು ಸಚಿವರು ವಿವರಿಸಿದರು.

ಸರ್ಕಾರದ ಆಶಯವೇನು: ಸಚಿವರು ಹೇಳಿದ್ದೇನು?

ಸರ್ಕಾರದ ಆಶಯವೇನು: ಸಚಿವರು ಹೇಳಿದ್ದೇನು?

ರಾಜ್ಯದಲ್ಲಿ ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಕಾಗುವುದಿಲ್ಲ. ಇದರ ಜೊತೆಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿ ವಿಷಯಗಳ ಬಗ್ಗೆ ತಿಳಿದುಕೊಂಡಿರಬೇಕು. ಆ ಮೂಲಕ ಶಿಕ್ಷಣವನ್ನು ಸಂಭ್ರಮಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಇದೇ ಉದ್ದೇಶದಿಂದ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.

ಯಾವ ಸ್ಪರ್ಧೆ ಯಾವುದು ಲಾಸ್ಟ್ ಡೇಟ್?

ಯಾವ ಸ್ಪರ್ಧೆ ಯಾವುದು ಲಾಸ್ಟ್ ಡೇಟ್?

* ವಿದ್ಯಾರ್ಥಿಗಳ ಹೆಸರು ನೋಂದಣಿಗೆ ಕೊನೆ ದಿನ: ಸೆ.10

* ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19 ರಿಂದ 23

* ಪ್ರಬಂಧಗಳನ್ನು ಅಪ್‌ಲೋಡ್‌ ಮಾಡಲು ಕೊನೆ ದಿನ: ಸೆ.20

* ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26 ರಿಂದ 30

* ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3 ರಿಂದ 7

* ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ

* ರಾಜ್ಯ ಮಟ್ಟದ ಕ್ವಿಜ್‌: ಅ.17 ರಿಂದ 19

* ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್‌ಲೈನ್‌): ಅ.18 ರಿಂದ 20

* ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ

English summary
Puneeth Satellite will launch between Nov 15 to Dec 31st from Sriharikota Centre, Says Higher Education Minister Dr Ashwath Narayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X