ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರವೇ ಶುದ್ಧ ಕುಡಿಯುವ ನೀರಿನ ಸೌಲಭ್ಯ
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಸರ್ಕಾರದ ನಿರ್ಧಾರ. ಆರ್ ಒ ತಂತ್ರಜ್ಞಾನ ಶುದ್ಧೀಕರಣ ಘಟಕಗಳನ್ನು ತೆರೆಯಲು ನಿರ್ಧಾರ. ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಿಂದ
ಬೆಂಗಳೂರು, ಜೂನ್ 14: ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ಅವರ ಸಂಬಂಧಿಗಳ ಉಪಯೋಗಕ್ಕಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರವೇ ಕುಡಿಯುವ ನೀರಿನ ಸೌಲಭ್ಯ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಿವರ್ಸ್ ಆಸ್ಮೋಸಿಸ್ (ಆರ್.ಒ) ತಂತ್ರಜ್ಞಾನದಡಿ ನೀರನ್ನು ಶುದ್ಧೀಕರಿಸುವ ಯಂತ್ರಗಳನ್ನು ಸ್ಥಾಪಿಸಿ, ಜನರಿಗೆ ಅನುಕೂಲ ಕಲ್ಪಿಸಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಆಯುಕ್ತ ಸುಬೋಧ್ ಯಾದವ್, ''ಸರ್ಕಾರಿ ಆಸ್ಪತ್ರಗಳಲ್ಲಿ ಕುಡಿಯಲು ಯೋಗ್ಯವಾದ ನೀರು ಸಿಗುವುದು ದುರ್ಲಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಸರ್ಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲು ನಿರ್ಧರಿಸಲಾಗಿದೆ'' ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಿವೆ. ಆರಂಭದಲ್ಲಿ ರಾಜ್ಯ ಸರ್ಕಾರವು ಈ ಯೋಜನೆಗೆ 10 ಕೋಟಿ ರು. ಮಂಜೂರು ಮಾಡಿದೆ.
ದೊಡ್ಡ ನಗರಗಳಲ್ಲಿ ಮಾತ್ರವಲ್ಲದೆ, ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ, ಎಲ್ಲಾ ಸಾರ್ವಜನಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲೂ ಈ ಯೋಜನೆ ಜಾರಿಗೊಳ್ಳಲಿದೆ.












Click it and Unblock the Notifications