ಕಾಲೇಜುಗಳಲ್ಲಿ ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ ರಚನೆ

ಬೆಂಗಳೂರು, ಜ.6 : ಯುವ ಜನರಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಲು ಕನ್ನಡ ಪುಸ್ತಕ ಪ್ರಾಧಿಕಾರ ವಿಶಿಷ್ಟ ಯೋಜನೆಯೊಂದನ್ನು ರೂಪಿಸಿದೆ. ಅದರ ಅನ್ವಯ ರಾಜ್ಯದ ಪದವಿ ಕಾಲೇಜುಗಳಲ್ಲಿ 'ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ'ವನ್ನು ರಚಿಸಲಾಗುತ್ತದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಬಂಜೆಗೆರೆ ಜಯಪ್ರಕಾಶ ಅವರು ಈ ಕುರಿತು ಮಾಹಿತಿ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಕನ್ನಡ ಪುಸ್ತಕಗಳು ಹೆಚ್ಚು ಬಿಡುಗಡೆಯಾಗುತ್ತಿವೆ. ಆದರೆ, ಓದುವ ವರ್ಗದ ಕಡಿಮೆಯಾಗುತ್ತಿದೆ. 40 ವರ್ಷದೊಳಗಿನವರು ಪುಸ್ತಕ ಓದುವುದನ್ನು ಮರೆತಿದ್ದಾರೆ ಎಂದು ಹೇಳಿದರು.

Dr. Banjagere Jayaprakash

ಇಂದಿನ ಯುವಕರಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಬೇಕಾಗಿದೆ. ಆದ್ದರಿಂದ ಪದವಿ ಕಾಲೇಜುಗಳಲ್ಲಿ 'ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ'ವನ್ನು ಆರಂಭಿಸಲಾಗುತ್ತಿದೆ ಎಂದು ಬಂಜೆಗೆರೆ ಜಯಪ್ರಕಾಶ ಅವರು ಮಾಹಿತಿ ನೀಡಿದರು.[ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್]

ಪುಸ್ತಕ ಪ್ರಾಧಿಕಾರ ರಾಜ್ಯಾದ್ಯಂತ 100 ಬಳಗವನ್ನು ಸ್ಥಾಪಿಸುವ ಗುರಿ ಹೊಂದಿದೆ. ವಿದ್ಯಾರ್ಥಿಗಳೇ ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ಈ ಬಳಗವನ್ನು ನಿರ್ವಹಣೆ ಮಾಡುತ್ತಾರೆ. ಪ್ರತಿ ಬಳಗಕ್ಕೆ ಪ್ರತಿ ತಿಂಗಳು 5 ಸಾವಿರ ರೂ. ನೀಡಲಾಗುತ್ತದೆ ಎಂದರು. [ಕನ್ನಡದಲ್ಲೂ ಓದಬಹುದು ಸಚಿನ್ ಆತ್ಮಕಥೆ!]

5 ಸಾವಿರ ರೂ. ಅನುದಾನದಲ್ಲಿ ಸಾಹಿತ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಮಾಡಬಹುದಾಗಿದೆ. ವಿದ್ಯಾರ್ಥಿಗಳು 'ನಾನು ಮೆಚ್ಚಿದ ಪುಸ್ತಕ' ಎಂಬ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದ್ದು, ಇದರಲ್ಲಿ ಪುಸ್ತಕಗಳ ಪರಿಚಯ ಮಾಡಿಕೊಡಬೇಕು. ಉತ್ತಮ ಪರಿಚಯ ಮಾಡಿಕೊಟ್ಟವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪುಸ್ತಕ ಪ್ರಾಧಿಕಾರದ ಈ ಪ್ರಯತ್ನಕ್ಕೆ ಪದವಿ ಕಾಲೇಜುಗಳಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗಾಗಲೇ 53 ಪದವಿ ಕಾಲೇಜುಗಳಿಂದ 'ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ'ವನ್ನು ರಚಿಸಲು ಅರ್ಜಿಯನ್ನು ಸ್ವೀಕರಿಸಿದ್ದೇವೆ. ಜನವರಿ 30ರೊಳಗೆ 100 ಅರ್ಜಿಯನ್ನು ನಿರೀಕ್ಷಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+