Puttaranga Shetty Profile: ವಿ. ಸೋಮಣ್ಣ ಸೋಲಿಸಿದ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ ಪಟ್ಟ

ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಡೆಪ್ಯುಟಿ ಸ್ಪೀಕರ್ ಪಟ್ಟ ಒಲಿದು ಬಂದಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಕೂಡ ಅವರು ಈಗಲೂ ನನಗೆ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದ ಸಂದರ್ಭದಲ್ಲಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದರು. ಸಿದ್ದರಾಮಯ್ಯ ಅವರ ಅತ್ಯಾಪ್ತ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಡೆಪ್ಯುಟಿ ಸ್ಪೀಕರ್ ಹುದ್ದೆಯ ಗೌರವ ಸಿಕ್ಕಿದೆ.

 Puttaranga Shetty Profile: Biography of Puttaranga Shetty, Deputy Speaker Of Vidhan Sabha

ಚಾಮರಾಜನಗರದಲ್ಲಿ ಈ ಬಾರಿ ಬಿಜೆಪಿಯಿಂದ ಮಾಜಿ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡಿದ್ದರು. ಸೋಮಣ್ಣ ಅವರನ್ನೇ ಸೋಲಿಸಿದ ಪುಟ್ಟರಂಗಶೆಟ್ಟಿ ನಾಲ್ಕನೇ ಬಾರಿ ಶಾಸಕರಾಗಿರುವ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಹಿಂದುಳಿದ ಜಿಲ್ಲೆ ಎನಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಗೆ ಪ್ರಾತಿನಿಧ್ಯ ಕೊಡಲು ಪುಟ್ಟರಂಗಶೆಟ್ಟಿ ಅವರಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ಕೊಡಲಾಗಿದೆ.

ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಪುಟ್ಟರಂಗಶೆಟ್ಟಿ

ಹಳೇ ಮೈಸೂರು ಭಾಗದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಕಳೆದ ನಾಲ್ಕು ಚುನಾವಣೆಗಳಿಂದ ಕೈ ಭದ್ರಕೋಟೆಯಾಗಿದ್ದು ಸಿ. ಪುಟ್ಟರಂಗಶೆಟ್ಟಿ ಕ್ಷೇತ್ರದಲ್ಲಿ ನಿರಂತರವಾಗಿ 4 ಬಾರಿ ಗೆದ್ದ ಮೊದಲ ಶಾಸಕರಾಗಿದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. 68ರ ಹರೆಯದ ಪುಟ್ಟರಂಗಶೆಟ್ಟಿ ಹಿರಿಯ ಶಾಸಕರಾಗಿದ್ದು ಉಪ್ಪಾರ ಜಾತಿಯ ರಾಜ್ಯದ ಏಕೈಕ ಶಾಸಕ ಎಂಬ ಹೆಗ್ಗಳಿಕೆಯೂ ಇವರದ್ದಾಗಿದ್ದಾಗಿದೆ.

ಪುಟ್ಟರಂಗಶೆಟ್ಟಿ ಆಸ್ತಿ ವಿವರ

ಪುಟ್ಟರಂಗ ಶೆಟ್ಟಿ ತಮ್ಮ ಹೆಸರಿನಲ್ಲಿ 8.74 ಕೋಟಿ ರೂಪಾಯಿ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದರು. ಕೈಯಲ್ಲಿ ಒಟ್ಟು 10 ಲಕ್ಷ ರುಪಾಯಿ ನಗದು ಇದ್ದು, ಪತ್ನಿ ಮತ್ತು ಇಬ್ಬರ ಮಕ್ಕಳ ಕೈಯಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಇದೆ ಎಂದು ಹೇಳಿದ್ದರು. ಪತ್ನಿ ಹೆಸರಿನಲ್ಲಿ 3 ಕೋಟಿ ರೂಪಾಯಿ, ಹಿರಿಯ ಮಗನ ಬಳಿ 92 ಲಕ್ಷ, ಕಿರಿಯ ಮಗನ ಬಳಿ 25 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಜೊತೆಗೆ ಜಂಟಿ ಖಾತೆಯಲ್ಲಿ 4.52 ಕೋಟಿ ರೂಪಾಯಿ ಸಾಲ ಇದ್ದು, ತಮ್ಮ ಹೆಸರಿನಲ್ಲಿ 3.57 ಕೋಟಿ ಸಾಲ ಇದೆ. ತಮಗೆ ಒಟ್ಟು 8.9 ಕೋಟಿ ರೂಪಾಯಿನಷ್ಟು ಸಾಲ ಇದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+