ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮನಗರ ಜನತೆಗೆ ಪಾದರಾಯನಪುರ ಪುಂಡರ ಭೀತಿ: ಮಾಜಿ ಸಿಎಂ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಏ. 21: ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ಪಾದರಾಯನಪುರ ವಾರ್ಡ್‌ನ್ನು ಕೆಂಪುವಲಯ ಎಂದು ಗುರುತಿಸಿ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿನಿಂದ ಮೃತಪಟ್ಟಿರುವ ಹಾಗೂ ದ್ವಿತೀಯ ಹಂತದ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಕರೆದೊಯ್ಯುವಾಗ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದವನ್ನು ಬಂಧಿಸಿ ರಾಮನಗರಕ್ಕೆ ಸ್ಥಳಾಂತರಿಸಲು ತೀರ್ಮಾನ ಮಾಡಲಾಗಿದೆ. ಇದಕ್ಕೆ ರಾಮನಗರ ಜಿಲ್ಲೆಯ ಜನರೂ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪಾದರಾಯನಪುರದಲ್ಲಿ ದಾಂಧಲೆ ಸೃಷ್ಟಿಸಿದ 141 ಮಂದಿ ಕೈಗೆ ಕೋಳ ಪಾದರಾಯನಪುರದಲ್ಲಿ ದಾಂಧಲೆ ಸೃಷ್ಟಿಸಿದ 141 ಮಂದಿ ಕೈಗೆ ಕೋಳ

ರಾಮನಗರ ಜನತೆಗೆ ಪಾದರಾಯನಪುರ ಪುಂಡರ ಭೀತಿ

ರಾಮನಗರ ಜನತೆಗೆ ಪಾದರಾಯನಪುರ ಪುಂಡರ ಭೀತಿ

ಕೊರೊನಾ ವೈರಸ್ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದಲ್ಲಿ ಕ್ವಾರಂಟೈನ್‌ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ರಾಮನಗರ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕರೋನ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

ಅಲೋಕ್ ಮೋಹನ್ ದುಡುಕು ನಿರ್ಧಾರ ಕಾರಣ

ಅಲೋಕ್ ಮೋಹನ್ ದುಡುಕು ನಿರ್ಧಾರ ಕಾರಣ

ಸೋಮವಾರ ಸೆರೆ ಸಿಕ್ಕ ಐವತ್ತನಾಲ್ಕು ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರೆಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೂ ತರಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಯೆ ಸೂಕ್ತ ಬಂದೊಬಸ್ತನೊಂದಿಗೆ ಇಡಿ

ಬೆಂಗಳೂರಿನಲ್ಲಿಯೆ ಸೂಕ್ತ ಬಂದೊಬಸ್ತನೊಂದಿಗೆ ಇಡಿ

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರಕಾರೀ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಸೂಕ್ತ ಬಂದೊಬಸ್ತನೊಂದಿಗೆ ಇಡುವುದು ಸೂಕ್ತ. ಸರಕಾರ ಇಂತಹ ಸೂಕ್ಷ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ತಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಜನರ ಸ್ವಾಸ್ಥ್ಯದೊಂದಿಗೆ ಆಟ!

ಜನರ ಸ್ವಾಸ್ಥ್ಯದೊಂದಿಗೆ ಆಟ!

ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೊರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಕಿಡಿ ಕಾರಿದ್ದಾರೆ.

English summary
Putting the rioters in Padayanapuram to Ramanagar jail is not a wise decision. Former Chief Minister HD Kumaraswamy has warned that the authorities and the state government are directly responsible for the disasters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X