ಕೆಪಿಎಸ್‌ಸಿ ಮೂಲಕ ಲೋಕೋಪಯೋಗಿ ಇಲಾಖೆ ನೇಮಕಾತಿ

ಬೆಂಗಳೂರು, ಡಿಸೆಂಬರ್ 17 : "ಲೋಕೋಪಯೋಗಿ ಇಲಾಖೆಯ 870 ಇಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ರದ್ದುಗೊಳಿಸಿದೆ" ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, " ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು. ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ನೇಮಕಾತಿ ರದ್ದುಗೊಳಿಸಲಾಗಿದೆ" ಎಂದರು.

"ಇಂಜಿನಿಯರ್‌ಗಳ ನೇಮಕಾತಿಯ ಜವಾಬ್ದಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ವಹಿಸಲಾಗಿದೆ. ವಿವಿಧ ಇಲಾಖೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ನಿರ್ವಹಣೆ ಮಾಡುತ್ತಿದೆ. ಈ ಸಂಸ್ಥೆ ಮೂಲಕ ಮಾಡಿದರೆ ಯಾವುದೇ ಸಮಸ್ಯೆ ಆಗುವುದಿಲ್ಲ" ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

Govind Karjol

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಲೋಕೋಪಯೋಗಿ ಇಲಾಖೆಗೆ 570 ಸಹಾಯಕ ಇಂಜಿನಿಯರ್, 300 ಕಿರಿಯ ಇಂಜಿನಿಯರ್‌ಗಳ ನೇಮಕಾತಿಗೆ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್‌ನಲ್ಲಿ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಆದರೆ, ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಪರೀಕ್ಷೆ ಫಲಿತಾಂಶವನ್ನು ತಡೆ ಹಿಡಿದಿತ್ತು. ಅಂತಿಮವಾಗಿ ಸರ್ಕಾರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಸರ್ಕಾರದ ನಡೆಯಿಂದಾಗಿ ಆತಂಕಕ್ಕೆ ಒಳಗಾಗಿದ್ದರು. ಈಗ ಸರ್ಕಾರ ಕೆಪಿಎಸ್‌ಸಿ ಮೂಲಕ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗುತ್ತದೆ.

ಮೈತ್ರಿ ಸರ್ಕಾರವಿದ್ದಾಗ ಎಚ್. ಡಿ. ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದರು. ತಮಗೆ ಬೇಕಾದವರನ್ನು ಇಲಾಖೆಗೆ ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಸರ್ಕಾರ ಈಗ ನೇಮಕಾತಿಯನ್ನು ರದ್ದುಪಡಿಸಿದ್ದು, ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+