ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಮೂಲಕ ಲೋಕೋಪಯೋಗಿ ಇಲಾಖೆ ನೇಮಕಾತಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 17 : "ಲೋಕೋಪಯೋಗಿ ಇಲಾಖೆಯ 870 ಇಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ರದ್ದುಗೊಳಿಸಿದೆ" ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, " ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು. ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ನೇಮಕಾತಿ ರದ್ದುಗೊಳಿಸಲಾಗಿದೆ" ಎಂದರು.

ಮೈತ್ರಿ ಸರ್ಕಾರದ ತೀರ್ಮಾನವನ್ನು ರದ್ದುಗೊಳಿಸಿದ ಬಿಜೆಪಿ ಸರ್ಕಾರಮೈತ್ರಿ ಸರ್ಕಾರದ ತೀರ್ಮಾನವನ್ನು ರದ್ದುಗೊಳಿಸಿದ ಬಿಜೆಪಿ ಸರ್ಕಾರ

"ಇಂಜಿನಿಯರ್‌ಗಳ ನೇಮಕಾತಿಯ ಜವಾಬ್ದಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ವಹಿಸಲಾಗಿದೆ. ವಿವಿಧ ಇಲಾಖೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ನಿರ್ವಹಣೆ ಮಾಡುತ್ತಿದೆ. ಈ ಸಂಸ್ಥೆ ಮೂಲಕ ಮಾಡಿದರೆ ಯಾವುದೇ ಸಮಸ್ಯೆ ಆಗುವುದಿಲ್ಲ" ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ದೇಶ ಸೇವೆಗೆ ಕೈತುಂಬ ಸಂಬಳ ನೀಡುವ ಉದ್ಯೋಗ ತೊರೆದು ಬಂದ ಕುವರಿದೇಶ ಸೇವೆಗೆ ಕೈತುಂಬ ಸಂಬಳ ನೀಡುವ ಉದ್ಯೋಗ ತೊರೆದು ಬಂದ ಕುವರಿ

Govind Karjol

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಲೋಕೋಪಯೋಗಿ ಇಲಾಖೆಗೆ 570 ಸಹಾಯಕ ಇಂಜಿನಿಯರ್, 300 ಕಿರಿಯ ಇಂಜಿನಿಯರ್‌ಗಳ ನೇಮಕಾತಿಗೆ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್‌ನಲ್ಲಿ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

DRDO ನೇಮಕಾತಿ 2020: 1817 ಹುದ್ದೆಗಳಿಗೆ ಅರ್ಜಿ ಆಹ್ವಾನ DRDO ನೇಮಕಾತಿ 2020: 1817 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದರೆ, ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಪರೀಕ್ಷೆ ಫಲಿತಾಂಶವನ್ನು ತಡೆ ಹಿಡಿದಿತ್ತು. ಅಂತಿಮವಾಗಿ ಸರ್ಕಾರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಸರ್ಕಾರದ ನಡೆಯಿಂದಾಗಿ ಆತಂಕಕ್ಕೆ ಒಳಗಾಗಿದ್ದರು. ಈಗ ಸರ್ಕಾರ ಕೆಪಿಎಸ್‌ಸಿ ಮೂಲಕ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗುತ್ತದೆ.

ಮೈತ್ರಿ ಸರ್ಕಾರವಿದ್ದಾಗ ಎಚ್. ಡಿ. ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದರು. ತಮಗೆ ಬೇಕಾದವರನ್ನು ಇಲಾಖೆಗೆ ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಸರ್ಕಾರ ಈಗ ನೇಮಕಾತಿಯನ್ನು ರದ್ದುಪಡಿಸಿದ್ದು, ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಿದೆ.

English summary
Mudhol MLA and Deputy Chief Ministers Of Karnataka Govind M.Karjol said that government cancelled the appointment of 870 engineer recruitment in PWD department and Recruitment process will conduct by KPSC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X