DL And RC: ಆರ್‌ಸಿ ಹಾಗೂ ಡಿಎಲ್ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಅಪ್ಡೇಟ್
DL And RC: ರಾಜ್ಯದಲ್ಲಿ ಸಾರಿಗೆ ಇಲಾಖೆಯು ವಾಹನ ಸವಾರರಿಗೆ ಮಹತ್ವದ ಮಾಹಿತಿಗಳನ್ನು ನೀಡುತ್ತಲಿರುತ್ತದೆ. ಇದೀಗ ಆರ್‌ಸಿ ಹಾಗೂ ಡಿಎಲ್ ಕುರಿತು ಸಚಿವ ರಾಮಲಿಂಗಾರೆಡ್ಡಿ ಅವರು ಅಪ್ಡೇಟ್ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಅದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಕ್ಯೂಆರ್ ಕೋಡ್ ಆಧಾರಿತ ನೋಂದಣಿ ಪ್ರಮಾಣಪತ್ರ (RC) ಮತ್ತು ಚಾಲನಾ ಪರವಾನಗಿ (DL) ಸ್ಮಾಟ್ ಕಾರ್ಡ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿದ ಈ ಕಾರ್ಡ್‌ಗೆ 200 ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ಯಾರಿಗೆ ಎಷ್ಟು ಎನ್ನುವ ಮಾಹಿತಿಯನ್ನು ಸಹ ನೀಡಿದ್ದಾರೆ.

ಒನ್ ನೇಷನ್ ಒನ್ ಕಾರ್ಡ್ ಯೋಜನೆಯಡಿ ನೂತನ ಸ್ಮಾರ್ಟ್ ಕಾರ್ಡ್ ವಿತರಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. RC ಮತ್ತು DLಗೆ ಅರ್ಜಿ ಸಲ್ಲಿಕೆ ಮಾಡಿದವರಿಗೆ ಹೊಸ ಸ್ಮಾರ್ಟ್ ಕಾರ್ಡ್ ಸಿಗಲಿದೆ. ಇದರಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿದಾಗ ವಾಹನ ಮತ್ತು ಚಾಲಕರ ಮಾಹಿತಿ ಲಭ್ಯವಾಗಲಿದೆ. ಒಂದು ಕಾರ್ಡ್‌ಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಇದರಲ್ಲಿ 135 ರೂಪಾಯಿ ಸರ್ಕಾರಕ್ಕೆ, 65 ರೂಪಾಯಿ ಸೇವಾದಾರರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಪ್ರತಿದಿನ 15,000 ಕಾರ್ಡ್‌ಗಳನ್ನು ಮುದ್ರಿಸಿ ವಿತರಣೆ ಮಾಡಲಾಗುವುದು. ಪಾಲಿ ಕಾರ್ಬೋನೇಟ್ ಮೆಟೀರಿಯಲ್‌ನಿಂದ ಸ್ಮಾರ್ಟ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ. ಲೇಸನ್ ಎನ್ ಗ್ರೇವಿಂಗ್ ಮೂಲಕ ಮುದ್ರಣ ಮಾಡಲಾಗುತ್ತದೆ. ಇದರಲ್ಲಿ 64 ಕೆಬಿ ಸಾಮರ್ಥ್ಯದ ಮೈಕ್ರೋಚಿಪ್ ಅಳವಡಿಕೆ ಮಾಡಲಾಗುವುದು. ಹೆಚ್ಚುವರಿಯಾಗಿ ಎನ್.ಐ.ಸಿ. ತಂತ್ರಾಂಶದ ಕ್ಯೂಆರ್ ಕೋಡ್ ಮುದ್ರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಸ್ಮಾರ್ಟ್ ಕಾರ್ಡ್‌ನಲ್ಲಿ ನೋಂದಣಿ ಸಂಖ್ಯೆ, ನೋಂದಣಿ ದಿನಾಂಕ, ಮಾಲೀಕರ ಹೆಸರು, ವಾಹನದ ವಿವರ, ಮಾಲಿನ್ಯದ ಪ್ರಮಾಣ ಸೇರಿದಂತೆ ಇನ್ನಿತರ ಮಾಹಿತಿ ಇರಲಿದೆ. ಹಳೇ ಕಾರ್ಡ್ ಚಲಾವಣೆಯಲ್ಲಿ ಇರಲಿದ್ದು, ಅರ್ಜಿ ಸಲ್ಲಿಕೆ ಮಾಡಿದವರಿಗೆ ಹೊಸ ಕಾರ್ಡ್ ಮುದ್ರಿಸಿ ವಿತರಣೆ ಮಾಡಲಾಗುತ್ತದೆ. ಡಿಸೆಂಬರ್ 15ರಿಂದ ಹೊಸ ಕಾರ್ಡ್ ವಿತರಣೆ ಆರಂಭ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಕೆಲವರು ಸಹಮತ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications