ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು FDA ಪರೀಕ್ಷೆ: ಪಿಯು ಪರೀಕ್ಷಾ ಮಂಡಳಿ ಸುರಕ್ಷತಾ ವ್ಯವಸ್ಥೆ ಅಳವಡಿಕೆ

|
Google Oneindia Kannada News

ಬೆಂಗಳೂರು ಫೆಬ್ರವರಿ 28: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ ಈ ಬಾರಿಯ FDA ನೇಮಕಾತಿ ಪರೀಕ್ಷೆಗೆ ವಿಶೇಷ ಭದ್ರತಾ ಕ್ರಮ ಕೈಗೊಂಡಿದೆ. ಪ್ರಿಯುಸಿ ಪರೀಕ್ಷಾ ಮಂಡಳಿ ಅಳವಡಿಸಿಕೊಂಡಿರುವ ವಿಶೇಷ ಭದ್ರತಾ ವ್ಯವಸ್ಥೆಯನ್ನು ಆಯೋಗ ಅಳವಡಿಸಿಕೊಂಡಿದೆ. ಇದರ ಜತೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.

ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆದ ಬಳಿಕ ಪರೀಕ್ಷಾ ಪ್ರಶ್ನೆ ಪತ್ರಿಕೆ ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಸಾಗಣೆ ಮಾಡುವ ಸಂಬಂಧ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿತ್ತು. ಅದನ್ನು ಭಾರೀ ಕರ್ನಾಟಕ ಲೋಕ ಸೇವಾ ಅಯೋಗ ಅಳವಡಿಸಿಕೊಂಡಿದೆ. ಸೆಕ್ಯೂರ್ಡ್ ಎಕ್ಸಾಮಿನೇಷನ್ ಸಿಸ್ಟಂ ಈ ಬಾರಿ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗೆ ಅಳವಡಿಸಿಕೊಳ್ಳಲಾಗಿದೆ. ಇನ್ನು ಪರೀಕ್ಷಾ ಉಪಕರಣ, ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ.

ಒಂದು ನಿಮಿಷ ವಾಹನ ನಿಂತರೂ ಅದರ ಸಂದೇಶ ಭದ್ರತಾ ಅಧಿಕಾರಿಗಳಿಗೆ ರವಾನೆಯಾಗುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಅಭ್ಯರ್ಥಿಗಳ ಎಲೆಕ್ಟ್ರಾನಿಕ್ ಉಪಕರಣ, ವಾಚ್, ಆಭರಣ, ಕಿವಿಯೋಲೆ ಮೇಲೆ ಕೂಡ ನಿಗಾ ಇಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಹೊಸ ಪ್ರವೇಶ ಪತ್ರದ ಮೂಲಕವೇ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

Question paper leak impact: PUC Exam board safety system for FDA exam

ಪೊಲೀಸರ ಭದ್ರತೆ: ಇನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರಿನ 78 ಕೇಂದ್ರ ಸೇರಿದಂತೆ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಕರೋನಾ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ನ್ನು ಸ್ಯಾನಿಟೈಸ್ ಮಾಡಲಾಗಿದೆ. ಇಂದು ಬೆಳಗ್ಗೆ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ, ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಲೀಕ್ ಆದ ಹಿನ್ನೆಲೆಯಲ್ಲಿ ಭಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಲೋಕ ಸೇವಾ ಅಯೋಗದ ಅಧಿಕಾರಿ ತಿಳಿಸಿದ್ದಾರೆ.

Question paper leak impact: PUC Exam board safety system for FDA exam

ಪ್ರಶ್ನೆ ಪತ್ರಿಕೆ ಲೀಕ್: ಕಳೆದ ಜನವರಿಯಲ್ಲಿ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಆಯೋಗದ ಸಿಬ್ಬಂದಿಯಿಂದಲೇ ಲೀಕ್ ಆಗಿತ್ತು. ಆಯೋಗದ ಪರೀಕ್ಷಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಸನಾಬೇಡಿ ಎಂಬಾಕೆ ಪ್ರಶ್ನೆ ಪತ್ರಿಕೆ ಕದ್ದು ತನ್ನ ಪ್ರೇಮಿಗೆ ನೀಡಿದ್ದಳು. ಅದು ರಾಜ್ಯದೆಲ್ಲೆಡೆ ಕಾಸಿಗೆ ಬಿಕರಿಯಾಗಿತ್ತು. ವಾಣಿಜ್ಯ ತೆರಿಗೆ ಇಲಾಖೆಯ ಇನ್‌ಸ್ಪೆಕ್ಟರ್ ಚಂದ್ರು ಪ್ರಶ್ನೆ ಪತ್ರಿಕೆ ಮಾರಾಟ ಮಾಡಲು ಹೋಗಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಈವರೆಗೂ ಸುಮಾರು 25 ಕ್ಕೂ ಹೆಚ್ಚು ಮಂದಿ ಬಂಧನಕ್ಕೆ ಒಳಗಾಗಿದ್ದು, ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಭಾರೀ ಭದ್ರತೆಯಲ್ಲಿ ಪರೀಕ್ಷೆ ನಡೆಸುತ್ತಿದೆ.

English summary
The Karnataka Public Service Commission has adopted the safety measures of the PUC Examination Board for FDA exam know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X