ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮದು ರಾಷ್ಟ್ರೀಯ ಪಕ್ಷ, ಹೆಬ್ಬೆಟ್ಟು ಪಾರ್ಟಿ ಜೆಡಿಎಸ್ ಪಾರ್ಟಿ ಅಲ್ಲ: ಆರ್. ಅಶೋಕ್

|
Google Oneindia Kannada News

ಚಿಕ್ಕಬಳ್ಳಾಪುರ,ನವೆಂಬರ್ 28: ನಮ್ಮದು ರಾಷ್ಟ್ರೀಯ ಪಕ್ಷ, ಹೆಬ್ಬೆಟ್ಟು ಪಾರ್ಟಿ ಜೆಡಿಎಸ್ ಪಾರ್ಟಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿಯವರಿಗೆ ಕಂದಾಯ ಸಚಿವ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೆನ್ನೆಟ್ಟಿನ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಆರ್ ಅಶೋಕ್ ಮಾತನಾಡಿ, ಜೆಡಿಎಸ್ ಕುಟುಂಬದವರು ಹೇಳಿದ್ರೆ ಮಾತ್ರ ಹೆಬ್ಬಟ್ಟು ಒತ್ತೋದು. ಈಗಲೂ ದೇವೇಗೌಡರು, ಇನ್ನೂ ಮುಂದೆನೂ ದೇವೇಗೌಡರು. ನಮ್ಮಲ್ಲಿ ವಾಜಪೇಯಿ, ಅಡ್ವಾಣಿ, ನರೇಂದ್ರ ಮೋದಿ ಇದ್ದಾರೆ ಎಂದು ಕಿಡಿಕಾರಿದರು.

ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಪಕ್ಷ ನಮ್ಮದಲ್ಲ. ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದವರಲ್ಲ, ಇಂಜಿನಿಯರ್ ಓದಿದ್ದಾರೆ. ಜೆ.ಎಚ್. ಪಾಟೀಲ್ ಹಾಗೂ ದೇವೇಗೌಡ, ರಾಮಕೃಷ್ಣ ಹೆಗಡೆ ಅವರ ಬಳಿ ತರಬೇತಿ ಪಡೆದಿದ್ದಾರೆ. ನಮ್ಮ ಮುಖ್ಯಮಂತ್ರಿ ಸರಳ ಮುಖ್ಯಮಂತ್ರಿ ಎಂದು ತಿರುಗೇಟು ನೀಡಿದರು.

R Ashok Alleges Jds Party Regarding Border Issue

ಮತದಾರರ ಮಾಹಿತಿ ಕಳವು ಪ್ರಕರಣದ ವಿಚಾರವಾಗಿ ಮಾತನಾಡಿ, ಈ ಪ್ರಕರಣದಲ್ಲಿ ನಮ್ಮ ಸರ್ಕಾರದ ಪಾತ್ರ ಏನು ಇಲ್ಲ, ಸುಮ್ಮನೆ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ೨೦೧೨ ರಲ್ಲಿ ಚಿಲುಮೆ ಸಂಸ್ಥೆ ಇದರ ಉಸ್ತುವಾರಿ ಹೊತ್ತಿತ್ತು, ಆಗಿನಿಂದಲೂ ಕಾಂಗ್ರೆಸ್ ಪಕ್ಷ ಬಾಯಿ ಮುಚ್ಚಿಕೊಂಡಿತ್ತು, ಈಇಗ ಬಾಯಿಬಿಚ್ಚಿದೆ. ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿದ್ದಾರೆ. ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದರು.

ನಮ್ಮ ಸರ್ಕಾರ ಎಸ್ ಎಸಿ ಎಸ್ಟಿ ಮೀಸಲಾತಿ ನೀಡಿದ ಮೇಲೆ ಕಾಂಗ್ರೆಸ್ ಗೆ ಹೊಟ್ಟೆಉರಿ ಬಂದಿದೆ. 75ವರ್ಷಗಳಿಂದ ಕಾಂಗ್ರೆಸ್ ಕೆಂಪೇಗೌಡರಿಗೆ ಗೌರವ ನೀಡಿರಲಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಅಂತಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಕಾಂಗ್ರೆಸ್ ಸರಕಾರ ದೇಶ ಹಾಗೂ ರಾಜ್ಯದಲ್ಲಿ 50 ವರ್ಷ ಆಡಳಿತದಲ್ಲಿತ್ತು ಆದರೆ ರಾಜ್ಯ ಹಾಗೂ ದೇಶಕ್ಕೆ ಕಾಂಗ್ರೆಸ್ ನ ಯಾವುದೇ ಕೊಡುಗೆ ಇಲ್ಲ.ಮುಂದೆ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಗುರಿ. ಈ ಬಾರಿ ಚುನಾವಣೆಯಲ್ಲಿ‌ ಕಾಂಗ್ರೆಸ್ ಸೋತ್ರೆ ಎಲ್ಲಂದರಲ್ಲಿ ಓಡಿ ಹೋಗ್ತಾರೆ ಎಂದು ಭವಿಷ್ಯ ನುಡಿದರು.

ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದೇನು..?

ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದದಲ್ಲಿ ಬಿಜೆಪಿಯ ಕೈವಾಡವಿದೆ ಎಂಬ ಶಂಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು. ಮಹರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದದ ಕಾವು ಹೆಚ್ಚಾಗಿದ್ದು, ಬೆಳಗಾವಿ ಗಡಿ ಭಾಗದ ಅಭಿವೃದ್ಧಿಗೆ ಕರ್ನಾಟಕದ‌ ಕೊಡುಗೆ ಹೆಚ್ಚಿದೆ. ಹೆಚ್ಚು ಸಕ್ಕರೆ ಕಾರ್ಖಾನೆಗಳು, ಸುವರ್ಣಸೌಧ, ನೀರಾವರಿ ಸೌಲಭ್ಯ ಕೊಟ್ಟಿದ್ದೇವೆ. ಶಿಕ್ಷಣ, ಭಾಷಾವಾರು ಸೌಲಭ್ಯದಲ್ಲಿ ಸ್ವಲ್ಪ ಸಮಸ್ಯೆ ಇರೋದು ನಿಜ. ಅಲ್ಲಿನ ಆರ್ಥಿಕ ಚಟುವಟಿಕೆಗಳನ್ನ ಮಹಾರಾಷ್ಟ್ರಕ್ಕೆ ಸೆಳೆಯಲು ಪ್ರಯತ್ನ. ಮಹಾರಾಷ್ಟ್ರದ ಧ್ವನಿಗೆ ಕರ್ನಾಟಕ ಬಿಜೆಪಿಯವರ ಕುಮ್ಮಕ್ಕು ಇದೆಯಾ ಎಂಬ ಅನುಮಾನ ಎಂದು ಹೇಳದರು.

ಶಿವಸೇನೆ ಒಡೆದು ಬಿಜೆಪಿ ಜೊತೆ ಸೇರಿದ ಗುಂಪು ಗಡಿ ತಗಾದೆ ತೆಗೆದಿದೆ. ಎಂಟು ದಿನದ ಕೋಲಾರ ಚಿಕ್ಕಬಳ್ಳಾಪುರ ಪ್ರವಾಸದಲ್ಲಿ ತೆಲುಗು ಭಾಷಿಕರು, ಆಂದ್ರ ಪರವಾನಗಿ ವಾಹನಗಳನ್ನ ನೋಡಿದೆ. ಆನೆಕಲ್ ಭಾಗದಲ್ಲಿ ತಮಿಳುನಾಡು, ಮಂಗಳೂರು ಭಾಗದಲ್ಲಿ ಕೇರಳ ಗಡಿ ಇದೆ. ಆದರೆ ಇಲ್ಲೆಲ್ಲೂ ಗಡಿ ವಿವಾದ , ಅಶಾಂತಿ ಇಲ್ಲ. ಬೆಳಗಾವಿಯ ಬಗ್ಗೆ ಮಹಾರಾಷ್ಟ್ರ ಕಣ್ಣು ಯಾಕೆ ಎಂದು ಪ್ರಶ್ನಿಸಿದರು.

R Ashok Alleges Jds Party Regarding Border Issue

ಬಸವರಾಜ ಬೊಮ್ಮಾಯಿ ಹೆಬ್ಬೆಟ್ಟಿನ ಮುಖ್ಯಮಂತ್ರಿ

ಶಿವರಾಜ್ ಪಾಟೀಲ್ ರನ್ನ ಗಡಿ ಆಯೋಗಕ್ಕೆ ನೇಮಕ ಮಾಡಿದ್ದಾರೆ. ಇವತ್ತು ಶರತ್ ಪವಾರ್ ಹೇಳಿಕೆಯನ್ನೂ ಗಮನಿಸಿದ್ದೇನೆ. ಬೆಳಗಾವಿ ಪಡೆದು ಬೇರೆ ಜಾಗ ಬಿಟ್ಟುಕೊಡ್ತೀವಿ ಎನ್ನುತ್ತಿದ್ದಾರೆ. ಪದೇ ಪದೇ ಯಾಕೆ ಕೆದಕುತ್ತಿದ್ದೀರಿ. ಬಿಜೆಪಿ ಸರಕಾರ ಬಂದ ವೇಳೆಯೇ ಗಡಿ ವಿವಾದ ಬರುತ್ತೆ. ಬೊಮ್ಮಾಯಿ ಹೆಬ್ಬೆಟ್ಟಿನ ಮುಖ್ಯಮಂತ್ರಿ. ಹೊರನೋಟಕ್ಕೆ ಕನ್ನಡಿಗರಿಗೆ ಮುಂದೆ ಹೇಳೋದೇ ಬೇರೆ. ಅಂತಿಮವಾಗಿ ದೆಹಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ಆರೋಪಿಸಿದರು.

25 ಸಂಸದರು ಅಮಿತ್ ಶಾ ಮೋದಿ ಮುಂದೆ ಮಾತನಾಡುವ ಶಕ್ತಿ ಇಲ್ಲ

ಇನ್ನೂ ಕೇಂದ್ರ ಸರಕಾರ ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ಜೋಡಣೆ ತೀರ್ಮಾನ ಮಾಡಿದೆ. ಎರಡೂ ನದಿಗಳ ಉಗಮ‌ಸ್ಥಾನ ಕರ್ನಾಟಕಕ್ಕೆ ಏನೂ ಹಂಚಿಕೆ ಮಾಡಿಲ್ಲ. ಈಗ ಮತ್ತೊಂದು ನ್ಯಾಯಾಧಿಕರಣ ಸ್ಥಾಪನೆ ಮಾಡಲು ಮುಂದಾಗಿದೆ. ನಿಮ್ಮ ಒಳ ಆಂತರಿಕ ವ್ಯವಹಾರದ‌ ಮೂಲಕ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಬೇಡ. 25 ಸಂಸದರು ಅಮಿತ್ ಶಾ ಮೋದಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದು ಕುಟುಕಿದರು.

ಮಹಾರಾಷ್ಟ್ರದವರಿಗೆ ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ಈ ವಿಚಾರ ಬೇಕು. ಕರ್ನಾಟಕದಲ್ಲಿ‌ ಮೂರುವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿಗೆ ಜನರ‌ ಬಳಿ ಹೋಗಲು ವಿಷಯ ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ. ಯಾರೋ ಮಾಡಿದ ಕೆಲಸಗಳ ಬಗ್ಗೆ ಭಾಷಣ ಮಾಡಬಹುದು. ಜನರ ನೆಮ್ಮದಿ ಕೆಡಿಸಿ ಧರ್ಮದ ವಿಚಾರ ಇಟ್ಕೊಂಡು ಹೋಗ್ತೀರಾ. ಗೋಡಂಬಿ, ಬಾದಮಿ‌ ಕೊಟ್ಟು ಕಳುಹಿಸೋಕೆ ಸರ್ವಪಕ್ಷ ಸಭೆಯನ್ನ ಯಾಕೆ ಕರೆಯುತ್ತೀರಿ. ಎರಡೂ ಕಡೆ ನಿಮ್ಮದೆ ಸರ್ಕಾರ, ಅಲ್ಲಿ ಮಾತನಾಡಿಕೊಳ್ಳಿ ಎಂದು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿದರು.

ಇನ್ನೂ ಗಡಿ ವಿವಾದದ ವಿಚಾರವಾಗಿ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿರುವ ವಿಚಾರವಾಗಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಕರೆದು ಏನು ಮಾಡುತ್ತೀರಿ. ಇದು ನಿಮ್ಮ ಜವಾಬ್ದಾರಿ, ಅಲ್ಲೂ ನಿಮ್ಮದೆ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಇದ್ದರೇನು, ಇಲ್ಲಿದ್ದರೇನು ಬೆಳಗಾವಿ.‌ ನಾವೆಲ್ಲರೂ ಭಾರತೀಯರು ಎನ್ನುತ್ತೀರಾ ಅಲ್ವೆ ಎಂದು ಪ್ರಶ್ನಿಸಿದರು.

English summary
ours is a national party, JDS party hangs itself from the tree put by the father says R ashok,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X