R Ashok : ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆ; ಗೋಪಾಲಯ್ಯ ಬದಲು ಆರ್‌ ಅಶೋಕ್‌ಗೆ ಸಕ್ಕರೆ ನಾಡಿನ ಉಸ್ತುವಾರಿ!

ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆ ಆಗಿದೆ. ಈವರೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಬದಲಿಸಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು,ಜನವರಿ24: ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಚುನಾವಣೆ ಹೊತ್ತಲಿ ಹಲವು ತಂತ್ರಗಳನ್ನ ರೂಪಿಸಲು ಮುಂದಾಗಿದ್ದು, ಮಂಡ್ಯ ಜಿಲ್ಲೆಯ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನ ನೇಮಕ ಮಾಡಲಾಗಿದೆ.

ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆ ಆಗಿದೆ. ಈವರೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಬದಲಿಸಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

R Ashok Appointed As Mandya District Incharge Minsiter

ಹಾಲಿ ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿದ್ದ ಕೆ.ಗೋಪಾಲಯ್ಯ ಹಾಸನದ ಉಸ್ತುವಾರಿಯೂ ಅವರೇ ಆಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ್ದ ನಾರಾಯಣಗೌಡ ನಂತರ ಮುಂದಿನ ಚುನಾವಣೆಯಲ್ಲಿ ಹಲವು ಸ್ಥಾನಗಳನ್ನ ಪಡೆಯುವ ಪ್ರಯತ್ನ ನಡೆಸುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರವಾಗಿದ್ದು, ಒಕ್ಕಲಿಗ ಸಮಮುದಾಯದ ಪ್ರಮುಖ ನಾಯಕ ಆರ್.ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಲೇ ಬೇಕು ಎಂಬ ಪ್ರಯತ್ನದಲ್ಲಿರುವ ಬಿಜೆಪಿಯ ಹೈಕಮಾಂಡ್ ನಾಯಕರು ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಳೆದ ತಿಂಗಳಿನಲ್ಲಿ ಮಂಡ್ಯ ಜಿಲ್ಲೆ ಅಮಿತ್ ಶಾ ಬಂದು ಹೋದ ನಂತರ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹಿಡಿತ ಸಾಧಿಸಲು ಹಲವು ಪ್ರಯತ್ನಗಳನ್ನ ನಡೆಸಿದೆ.

R Ashok Appointed As Mandya District Incharge Minsiter

ಇನ್ನೂ ಎರಡು ದಿನದಲ್ಲಿ ಗಣರಾಜೋತ್ಸವ ಕಾರ್ಯಕ್ರಮ ಇದ್ದು, ಮಂಡ್ಯದಲ್ಲಿ ನಡೆಯುವ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರೇ ಧ್ವಜಾರೋಹಣ ಮಾಡುವ ಅವಕಾಶವನ್ನ ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+