ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ : ಕಾರಣವೇನು?
ಬೆಂಗಳೂರು, ಏಪ್ರಿಲ್ 21: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧಿಸಿದಂತೆ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್ ಅಶೋಕ್ , ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣದ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಎರಡು ಮೂರು ತಿಂಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮತಾಂಧರಿಗೆ ನೆರವು ನೀಡಲು ಕಾಂಗ್ರೆಸ್ ಸಿದ್ಧವಾಗಿದೆ. ರಾಜ್ಯದಲ್ಲಿ ತಾಲಿಬಾನ್ ಆಡಳಿತ ಇದೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದ್ದಂತಿದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಜೀವಕ್ಕೆ ಬೆಲೆ ಇಲ್ಲವಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇವರು ಏನೇ ಮಾಡಿದರೂ ನೆರವು ನೀಡಲು ಕಾಂಗ್ರೆಸ್ ಸಿದ್ಧ ಇದೆ. ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಜೈ ಶ್ರೀರಾಮ್ ಎಂದರೆ ಬಡಿದು ಹಾಕ್ತಾರೆ. ಹನುಮಾನ್ ಚಾಲೀಸ ಹಾಕಿದರೆ ಹಲ್ಲೆ ಮಾಡುತ್ತಾರೆ. ಆದರೆ, ಪಾಕಿಸ್ತಾನ್ ಜಿಂದಾಬಾದ್ ಅಂದ್ರೆ ಬಿರಿಯಾನಿ ಕೊಡ್ತಾರೆ. ಜೊತೆಗೆ ವಿಧಾನಸೌಧಕ್ಕೂ ಪಾಸ್ ಕೊಡ್ತಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯ ನೇಹಾ ಕೊಲೆ ಘಟನೆಗಳನ್ನೆಲ್ಲಾ ನೋಡಿದರೆ ಕಾನೂನು ಸುವ್ಯವಸ್ಥೆಯೇ ಈ ರಾಜ್ಯದಲ್ಲಿ ಇಲ್ಲ ಅನಿಸುತ್ತದೆ ಎಂದಿದ್ದಾರೆ. ನೇಹಾ ಕೊಲೆ ಘೋರ ದುರಂತವಾಗಿದೆ. ಲವ್ ಜಿಹಾದ್ ಎಂದು ನಾವು ಹೇಳಿದರೆ ನಿಮ್ಮ ಹೊಟ್ಟೆಗೆ ಬೆಂಕಿ ಬಿದ್ದಂತಾಗುತ್ತದೆ. ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಅವರೆಯೇ ಲವ್ ಜಿಹಾದ್ ಎನ್ನುತ್ತಿದ್ದಾರೆ. ನಿಮ್ಮ ಪಕ್ಷದ ಕಾರ್ಯಕರ್ತರನ ರಕ್ಷಣೆ ಮಾಡುವ ಯೋಗ್ಯತೆಯೂ ನಿಮಗೆ ಇಲ್ಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನೇಹಾ ಕೊಲೆ ಲವ್ ವಿಚಾರಕ್ಕೆ ಆಗಿದ್ದು ಎಂದು ಪ್ರಕರಣ ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೇಹಾ ಕೊಲೆ ಪ್ರಕರಣವನ್ನು ಸಿದ್ದರಾಮಯ್ಯ ಪ್ರೇಮಿಗಳ ಕಲಹ ಎನ್ನುತ್ತಾರೆ. ಜಿ ಪರಮೇಶ್ವರ್ ಒಂದು ಹೆಜ್ಜೆ ಮುಂದೆ ಹೋಗಿ ದಾಖಲೆ ಬಿಡುಗಡೆ ಮಾಡುತ್ತಾರೆ. ಮಾರನೆ ದಿನ ತಮ್ಮ ಹೇಳಿಕೆಯಿಂದ ಬೇಸರ ಆಗಿದ್ದರೆ ಕ್ಷಮಿಸಿ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಇನ್ನೂ ಡಿಕೆ ಸುರೇಶ್ ಈ ದೇಶ ಇಬ್ಭಾಗ ಮಾಡಬೇಕು ಅಂತಿದಾರೆ ಬಿಡಿ. ದೇಶ ವಿಭಜನೆ ಮಾಡಿದ ಗ್ಯಾಂಗ್ ಇವರದ್ದು, ಎಂದು ಆರ್ ಅಶೋಕ್ ಲೇವಡಿ ಮಾಡಿದ್ದಾರೆ.











Click it and Unblock the Notifications