ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ, ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ ಕೊಡಿ
ಬೆಂಗಳೂರು, ಡಿಸೆಂಬರ್ 18: ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆಗಳಾಗಿವೆ. ಈ ವೇಳೆ ಬಾಣಂತಿಯರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಆರೋಗ್ಯ ಇಲಾಖೆ ರೋಗಪೀಡಿತವಾಗಿದೆ. ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ ಎಂದು ದೂರಿದರು.
ಬುಧವಾರ ವಿಧಾನಸಭೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಪ್ರಸ್ತಾಪಿಸಿದರು. ಬಾಣಂತಿಯರ ಸಾವು ಪ್ರಕರಣ, ಎದುರಾದ ಸಮಸ್ಯೆಗೆ ತಾರ್ಕಿಕ ಅಂತ್ಯ ನೀಡಬೇಕು. ಔಷಧಿ ತಯಾರಿಕಾ ಕಂಪನಿಗಳಿಗೆ ಸಂದೇಶ ಹೋಗಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಆ ವರದಿಯನ್ನು ಸದನದಲ್ಲಿ ಮಂಡಿಸಬೇಕು. ಇದರಿಂದಾಗಿ ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಬಂದು ಬಾಣಂತಿಯರ ಸಾವನ್ನು ತಡೆಯಬಹುದು. ಅಕ್ರಮಕ್ಕೆ ಕಡಿವಾಣ ಹಾಕಬಹುದು ಎಂದು ಒತ್ತಾಯಿಸಿದರು.

ಬಳ್ಳಾರಿಯಲ್ಲಿ ಮಾತ್ರವಲ್ಲದೆ ರಾಜ್ಯ ಬೇರೆ ಬೇರೆ ಜಿಲ್ಲೆಗಳಲ್ಲಿ ತಾಯಂದಿರ ಸಾವಿನ ಘಟನೆಗಳು ನಡೆದಿವೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯೇ ರೋಗಪೀಡಿತವಾಗಿದೆ. ಇಂತಹ ಘಟನೆ ನಡೆದಾಗ ತಕ್ಷಣ ಆರೋಗ್ಯ ಸಚಿವರು ಅಲ್ಲಿಗೆ ಭೇಟಿ ನೀಡಬೇಕು. ನಾನು ಬಳ್ಳಾರಿಗೆ ಮೂರು ದಿನದ ನಂತರ ಹೋದರೆ, ಸಚಿವರು ಆರು ದಿನದ ಬಳಿಕ ಭೇಟಿ ನೀಡಿದ್ದಾರೆ.
ತಪ್ಪು ಒಪ್ಪಿಕೊಳ್ಳದ ವೈದ್ಯಾಧಿಕಾರಿಗಳು
ಪ್ರಕರಣ ನಡೆದ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಯಾರೂ ತಪ್ಪು ಒಪ್ಪಿಕೊಳ್ಳದೆ ಒಬ್ಬರ ಮೇಲೆ ಒಬ್ಬರು ದೂರು ಹೇಳುತ್ತಿದ್ದಾರೆ. ಈ ನಡುವೆ ಸರ್ಕಾರ ಯಾರೋ ಒಬ್ಬ ಅಧಿಕಾರಿಯ ಮೇಲೆ ಕ್ರಮ ಕೈಗೊಂಡು ಬಲಿಪಶು ಮಾಡಿದೆ. ಸರ್ಕಾರಕ್ಕೆ ಬದ್ಧತೆ ಇದ್ದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕಿತ್ತು ಎಂದು ಹೇಳಿದರು.

ಸಿಜೇರಿಯನ್ ಸರಿಯಾಗಿ ಮಾಡಿದ್ದೇವೆ, ಆದರೆ ಐವಿ ದ್ರಾವಣ ನೀಡಿದ ಕೂಡಲೇ ಕಿಡ್ನಿಯ ಕ್ರಿಯೇಟಿನ್ ಪ್ರಮಾಣದಲ್ಲಿ ವ್ಯತ್ಯಾಸವಾಗಿದೆ. ಅದನ್ನು ನಿಯಂತ್ರಿಸಲು ಹೋದಾಗ ಅಂಗಾಂಗ ವೈಫಲ್ಯವಾಗಿದೆ ಎಂದು ಬಳ್ಳಾರಿ ಆಸ್ಪತ್ರೆಯ ವೈದ್ಯರು ನನಗೆ ತಿಳಿಸಿದ್ದಾರೆ. ಆದರೆ ಸರ್ಕಾರದ ವರದಿಯಲ್ಲಿ ಈ ಬಗ್ಗೆ ಎಲ್ಲೂ ಹೇಳಿಲ್ಲ. ಗರ್ಭಿಣಿಯರಿಗೆ ಮೊದಲೇ ರೋಗ ಇತ್ತು ಎಂದು ಈ ವರದಿಯಲ್ಲಿ ಬರೆಯಲಾಗಿದೆ ಎಂದು ತಿಳಿಸಿದರು.
ಸರ್ಕಾರ ಕೋರ್ಟ್‌ನಿಂದ ತಡೆ ತರಬಹುದಿತ್ತು!
ಈ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಅಧಿಕಾರಿಗಳು ತಿಳಿಸಿದ್ದಾರೆ. ಇದರ ವಿರುದ್ಧ ದಾಖಲಾದ ಪ್ರಕರಣದ ವಿರುದ್ಧ ಸರಿಯಾದ ವಕೀಲರನ್ನು ನೇಮಿಸಿ ನ್ಯಾಯಾಲಯದಲ್ಲಿ ಸರ್ಕಾರ ಹೋರಾಟ ಮಾಡಬೇಕಿತ್ತು. ಸರ್ಕಾರ ಯಾಕೆ ಹೈಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತರಲಿಲ್ಲ? ಇಲ್ಲಿ ಕೇಂದ್ರ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಇಲ್ಲಿ ರಾಜ್ಯ ಸರ್ಕಾರ ಹಣ ಕೊಟ್ಟು ಔಷಧಿ ಖರೀದಿಸುತ್ತಿದೆ. ಈ ಬಗ್ಗೆ ಸರ್ಕಾರ ಚಿಂತಿಬೇಕಿತ್ತು ಎಂದರು.
ಐವಿ ದ್ರಾವಣದ ಸುಮಾರು 37 ಬ್ಯಾಚ್‌ಗಳು ಕಳಪೆ ಎಂದು ಗುರುತಿಸಲಾಗಿದೆ. ಇಷ್ಟಾದ ಮೇಲೂ ಅದರ ವಿರುದ್ಧ ಸರ್ಕಾರ ಕ್ರಮ ವಹಿಸಲಿಲ್ಲ. ವಕೀಲರು ಇದರ ವಿರುದ್ಧ ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡಿಸಲಿಲ್ಲ. ಹೀಗಾದರೆ ಈ ಸಾವಿಗೆ ಯಾರು ನ್ಯಾಯ ಕೊಡುತ್ತಾರೆ? ಎಂದು ಪ್ರಶ್ನಿಸಿದರು.
ದಾವಣಗೆರೆ ಆಸ್ಪತ್ರೆಯಲ್ಲಿ 28 ತಾಯಂದಿರ ಸಾವು ಸಂಭವಿಸಿದೆ. ರಾಯಚೂರಿನಲ್ಲಿ ಮೂರು ತಿಂಗಳಲ್ಲಿ 10 ಬಾಣಂತಿಯರು ಮೃತಪಟ್ಟಿದ್ದಾರೆ. ಚಿತ್ರದುರ್ಗದ ಆಸ್ಪತ್ರೆಯಲ್ಲೂ ಒಬ್ಬ ತಾಯಿ ಸತ್ತಿದ್ದಾರೆ. ತಾಯಿ ಮತ್ತು ಮಗುವಿಗೆ ಸರ್ಕಾರ ಸುರಕ್ಷತೆಯ ಗ್ಯಾರಂಟಿ ನೀಡಬೇಕಿದೆ ಎಂದು ಆಗ್ರಹಿಸಿದರು.
ಕಪ್ಪು ಪಟ್ಟಿಗೆ ಸೇರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಈ ಮೆಡಿಕಲ್ ಮಾಫಿಯಾವನ್ನು ಸರ್ಕಾರ ತಡೆಹಿಡಿಯಬೇಕಿದೆ. ಕ್ಯಾನ್ಸರ್ ಔಷಧಿಯನ್ನು ಡ್ರಗ್ ಮಾಫಿಯಾಗಾಗಿ ಬಳಸಲಾಗುತ್ತಿದೆ. ಇಂತಹ ಡ್ರಗ್‌ಗಳು ಸುಲಭವಾಗಿ ಹೊರಗೆ ದೊರೆಯುತ್ತಿದೆ ಎಂದರೆ ಆರೋಗ್ಯ ಇಲಾಖೆ ಸತ್ತಿದೆ ಎಂದರ್ಥ. ಸಚಿವರು ಹಾಗೂ ಅಧಿಕಾರಿಗಳು ಏಕೆ ತಪಾಸಣೆ ಮಾಡುತ್ತಿಲ್ಲ? ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲ ಆಗುತ್ತಿದೆ ಎಂದು ಆರೋಪಿಸಿದರು.
ನಕಲಿ ವೈದ್ಯರ ಹಾವಳಿ ಹೆಚ್ಚು: ಕ್ರಿಯಾಶೀಲತೆ ಕಡಿಮೆ
ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿದೆ. ನಾನು ಆರೋಗ್ಯ ಸಚಿವನಾಗಿದ್ದಾಗ 20 ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿದ್ದೆ. ಒಮ್ಮೆ ದಾವಣಗೆರೆಗೆ ಹೋಗಿದ್ದಾಗ 50 ನಕಲಿ ವೈದ್ಯರನ್ನು ಒಂದೇ ಬಾರಿಗೆ ಜೈಲಿಗೆ ಕಳುಹಿಸಿದ್ದೆ. ಈ ಬಗೆಯ ಕ್ರಿಯಾಶೀಲತೆ ಇಲಾಖೆಯಲ್ಲಿ ಕಂಡುಬರುತ್ತಿಲ್ಲ ಎಂದು ದೂರಿದರು.
ವಯನಾಡಿನಲ್ಲಿ ಆನೆ ತುಳಿತದಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಿದರೆ, ರಾಜ್ಯದ ಸಂತ್ರಸ್ತರಿಗೆ 2 ಲಕ್ಷ ರೂ. ನೀಡಲಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆಗೆ ಲೋಕಾಯುಕ್ತರು ಭೇಟಿ ನೀಡಿ ವರದಿ ಮಾಡಿದ್ದಾರೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ, ಯಂತ್ರದ ಕೊರತೆ, ಮಕ್ಕಳ ನಿಗಾ ಘಟಕದಲ್ಲಿ ಕಾರ್ಯ ನಿರ್ವಹಿಸದ ವೆಂಟಿಲೇಟರ್, ಬಾಣಂತಿಯರಿಗೆ ಬಿಸಿನೀರಿಲ್ಲ, ಕಳಪೆ ಔಷಧಿ, ಸಾವಿರ ಜನರಿಗೆ ಒಂದು ಶೌಚಾಲಯ, ಹಳೆಯ ಔಷಧಿಗಳು ವಿಲೇವಾರಿಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ವಿವರಿಸಿದರು.
ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದರೆ ಸರ್ಕಾರ ವಿವಿಧ ಶುಲ್ಕಗಳನ್ನು ಏರಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಶುಲ್ಕ ಏರಿಕೆಗೆ ಸಿದ್ಧತೆ ನಡೆದಿದೆ. ಹಲ್ಲು ಕೀಳುವುದಕ್ಕೂ ಶುಲ್ಕ ಏರಿಸಲಾಗಿದೆ ಎಂದು ಸರ್ಕಾರದ ಮೇಲೆ ಕಿಡಿ ಕಾರಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications