'ತಿಂಗಳಿಗೊಮ್ಮೆ 2 ಸಾವಿರ ಹಣ ಕೊಡಲು ನಿಮ್ಮಪ್ಪನ ಮನೆ ಗಂಟಾ'

ಬೆಂಗಳೂರು, ಮೇ 22: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ರಾಜ್ಯ ಸರಕಾರ ದಿವಾಳಿಯಾಗಿದೆ. ಸಾಲ ಪಡೆದು ಸಂಬಳ ಕೊಡುವಂಥ ಸ್ಥಿತಿ ಬಂದಿದೆ. ನಮ್ಮ ಡಿ.ಕೆ.ಶಿವಕುಮಾರಣ್ಣ ನಿನ್ನೆ ಇದನ್ನು ಸರಿಯಾಗಿ ಹೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಹಣ ಕೊಡಲು ನಿಮ್ಮಪ್ಪನ ಮನೆ ಗಂಟಾ ಎಂದು ಕೇಳಿದ್ದಾರೆ ಎಂದು ತಿಳಿಸಿದರು.

ಸರ್ಕಾರ ರಚನೆಯ ಸಂದರ್ಭದಲ್ಲಿ ತಿಂಗಳಿಗೊಮ್ಮೆ 2 ಸಾವಿರ ಫಟಾಫಟ್ ಹಣ ಕೊಡುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಇಲ್ಲಿ ಶಿವಕುಮಾರ್ ಕಟಾಕಟ್, ಯಾವಾಗ ಹಣ ಬರುತ್ತೋ ಆಗ ದುಡ್ಡು ಕೊಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳೇ.. ಯಾವ ಸಾಧನೆಗಾಗಿ ಈ ಎರಡು ವರ್ಷದ ಸಂಭ್ರಮಾಚರಣೆ ಮಾಡಿದ್ದೀರಿ? ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಅವರು ಪ್ರಶ್ನಿಸಿದರು.

R Ashok Lashed Out At DK Shivakumar On Gruha Lakshmi Yojana

ಹಾಲಿನ ದರ ಏರಿಸಿದ್ದೀರಿ. ನೀರು, ವಿದ್ಯುತ್, ಪೆಟ್ರೋಲ್, ಡೀಸೆಲ್, ಆಸ್ತಿ ತೆರಿಗೆ- ಇವೆಲ್ಲವನ್ನೂ ಏರಿಸಿದ್ದೀರಿ. ದರ ಏರಿಸಿದ ಪರಿಣಾಮವಾಗಿ ಜನರು ಕಷ್ಟದಲ್ಲಿರುವಾಗಿ, ಸಮಾವೇಶ ಮಾಡಬೇಕೆಂದು ನಿಮಗೆ ಯಾಕೆ ಅನ್ನಿಸಿದೆ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಎರಡು ವರ್ಷಗಳಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 187 ಕೋಟಿಯನ್ನು ಫಟಾಫಟ್ ಲೂಟಿ ಮಾಡಿದ್ದೀರಿ. ಇನ್ನೊಂದೆಡೆ 89 ಕೋಟಿ ಲೂಟಿ ಆದುದಾಗಿ ಸಿದ್ದರಾಮಯ್ಯನವರೇ ಅಧಿವೇಶನದಲ್ಲೇ ಹೇಳಿದ್ದಾರೆ. ಅದಕ್ಕಾಗಿ ಈ ಸಂಭ್ರಮವೇ? ಮುಡಾ ಹಗರಣದಲ್ಲಿ ವಾಸ್ತು ಪ್ರಕಾರ ಇರುವ 14 ಮೂಲೆ ನಿವೇಶನಗಳನ್ನು ಲೂಟಿ ಹೊಡೆದುದಕ್ಕೆ ನಿಮ್ಮ ಈ ಸಂಭ್ರಮಾಚರಣೆಯೇ? ಎಂದು ಆರ್.ಅಶೋಕ್ ಅವರು ಕೇಳಿದರು.

ಕಳಪೆ ದ್ರಾವಣ ನೀಡಿ ದಿನನಿತ್ಯ 15- 20 ಬಾಣಂತಿಯರ ಸಾವಾಗಿದೆಯಲ್ಲವೇ? ಸಚಿವರೇ, ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೋದರೆ ವಾಪಸ್ ಬರುವುದೇ ಇಲ್ಲವೆಂಬ ಗ್ಯಾರಂಟಿಗಾಗಿ ಈ ಸಾಧನೆಯೇ? ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಹಾರ ಬರುವುದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ನಿಮ್ಮ ಸಚಿವರು ಹೇಳಿದ್ದಾರೆ. ಬರಗಾಲ ಬರಲೆಂದು ರೈತರು ಕೇಳಿಕೊಳ್ಳುತ್ತಾರೆಂದು ಇನ್ನೊಬ್ಬ ಸಚಿವ ಶಿವಾನಂದ ಪಾಟೀಲರು ಹೇಳಿದ್ದಾರೆ. ಈ ಸಾಧನೆಗಾಗಿ ಸಮಾವೇಶವೇ? ಎಂದು ಪ್ರಶ್ನಿಸಿದರು.
ವಕ್ಫ್ ಮಂಡಳಿ ಹೆಸರಿನಲ್ಲಿ ಸಾಬರು ಲಕ್ಷಾಂತರ ಎಕರೆ ರೈತರ ಜಮೀನು, ದೇವಸ್ಥಾನದ ಆಸ್ತಿಯನ್ನು ಲೂಟಿ ಹೊಡೆದರಲ್ಲವೇ? ಅವರಿಗೆಲ್ಲ ಇದೇ ಜಮೀರ್ ಅಹ್ಮದ್ ಕೃಪಾಶೀರ್ವಾದ ಮಾಡಿದ್ದರಲ್ಲವೇ? ವಕ್ಫ್ ಆಸ್ತಿ ವಾಪಸ್ ಕೊಡಿಸುವುದಾಗಿ ಹೇಳಿಕೆ ಕೊಟ್ಟರಲ್ಲವೇ? ಇದಕ್ಕಾಗಿ ನಿಮ್ಮ ಸಾಧನಾ ಸಮಾವೇಶ ಮಾಡುತ್ತಿದ್ದೀರಾ ಎಂದು ಕೇಳಿದರು. ಕೆಪಿಎಸ್ಸಿ ಪ್ರಶ್ನೆಪತ್ರಿಕೆ ತಯಾರು ಮಾಡಲು ಯೋಗ್ಯತೆ ಇಲ್ಲದ ಸರಕಾರ ಇದು. ಕನ್ನಡ ಅನುವಾದದಲ್ಲಿ 79 ತಪ್ಪು ಮಾಡಿದ್ದಾರೆ. 2 ಲಕ್ಷ ಅಭ್ಯರ್ಥಿಗಳು ಇದ್ದರು. ಅವರ ಮನೆ, ಜೀವನ ಹಾಳು ಮಾಡಿದ್ದೀರಲ್ಲವೇ? ಅವರ ಬಾಳಿಗೆ ಕೊಡಲಿ ಇಟ್ಟಿದ್ದಕ್ಕೆ ಈ ಸಾಧನಾ ಸಮಾವೇಶ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.

ಹುಬ್ಬಳ್ಳಿಯಲ್ಲಿ ನೇಹಾರ ಲವ್ ಜಿಹಾದ್ ಕೊಲೆ ಆಯಿತು. ಇದಕ್ಕಾಗಿ ಸಂಭ್ರಮಾಚರಣೆಯೇ? ನಾಗಮಂಗಲದಲ್ಲಿ ಪೊಲೀಸ್ ವ್ಯಾನಿನಲ್ಲೇ ಗಣೇಶನ ವಿಗ್ರಹದ ಮೆರವಣಿಗೆ ನಡೆಸಿ ವಿಗ್ರಹ ವಿಸರ್ಜಿಸಿದ್ದೀರಿ. ಗಣೇಶನಿಗೂ ಜೈಲುವಾಸ ಮಾಡಿದ್ದೀರಿ. ಇದಕ್ಕೋಸ್ಕರ ಈ ಸಮಾವೇಶವೇ ಎಂದು ಆರ್.ಅಶೋಕ್ ಅವರು ಕೇಳಿದರು.ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದಿದ್ದೀರಿ. ಪಾಕಿಸ್ತಾನ ಜಿಂದಾಬಾದ್ ಎಂದರೆ, ನಸೀರ್ ಸಾಬ್ ಜಿಂದಾಬಾದ್ ಹೇಳಿಕೆ ಕೊಟ್ಟಿರಿ. ಫೊರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದದ್ದು ಸಾಬೀತಾಗಿದೆ. ನಿಮಗೆ ಮಾನ ಮರ್ಯಾದೆ ಇದೆಯೇ ಕಾಂಗ್ರೆಸ್ಸಿಗರೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಮಳೆಯಿಂದ 5 ಜನ ಮೃತಪಟ್ಟಿದ್ದಾರೆ. ಈ ಸಾವಿನ ಮೇಲೆ ಸಮಾವೇಶ ಮಾಡಿದ್ದೀರಿ. ಬೆಂಗಳೂರಿನ ಜನರು ಕರ್ನಾಟಕ ಬಜೆಟ್‍ನ ಶೇ 67 ರಷ್ಟು ತೆರಿಗೆ ಕಟ್ಟುತ್ತಾರೆ. ಅಂಥವರನ್ನು ನೀರಿನಲ್ಲಿ ಮುಳುಗಿಸಿದ್ದೀರಿ. ತೇಲುತಿರುವ ಬೆಂಗಳೂರು ಮಾಡಿದ್ದೀರಲ್ಲವೇ? ಇದಕ್ಕಾಗಿ ನಿಮ್ಮ ಸಮಾವೇಶ ಮಾಡಿದ್ದೀರಾ ಎಂದು ಕೇಳಿದರು. ಇನ್ನೂ ಹಾಲಿನ ದರ 3 ಬಾರಿ 9 ರೂ. ಹೆಚ್ಚಿಸಿ ರೈತರಿಗೆ ಎಷ್ಟು ಪೈಸೆ ಕೊಟ್ಟಿದ್ದೀರಿ? ರೈತರ ಸಬ್ಸಿಡಿ ಇನ್ನೂ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕದಲ್ಲಿ ಹೆಚ್ಚು ಬಾರ್‍ಗಳು, ವೈನ್ ಸ್ಟೋರ್ ತೆರೆದಿದ್ದೀರಿ. ಅದಕ್ಕಾಗಿ ವಿಪಕ್ಷವಾದ ನಮ್ಮಿಂದ ನಿಮಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದರು. ಬಾರ್, ವೈನ್ ಸ್ಟೋರ್‍ಗೆ ಹಳ್ಳಿಯಲ್ಲಿ 2 ಕೋಟಿ, ನಗರದಲ್ಲಿ 3 ಕೋಟಿ ದರ ನಿಗದಿ ಮಾಡಿದ್ದಾರೆ ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+