ರಾಜಕೀಯ ಹಾವು-ಏಣಿ ಆಟದಲ್ಲಿ ಮೇಲೇಳಲು ಜಾತಿ ಗಣತಿ ವರದಿ ಅಸ್ತ್ರ: ಬಿಜೆಪಿ

ಬೆಂಗಳೂರು, ಜನವರಿ 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ಗುರುವಾರ ನಡೆಯಲಿದೆ. ಸರ್ಕಾರದ ಆಂತರಿಕ ಹಾಗೂ ಪ್ರಭಾವಿ ಜಾತಿಯ ಹಿನ್ನೆಲೆಯ ಮುಖಂಡರ ವಿರೋಧದ ನಡುವೆ ಜಾತಿ ಗಣತಿ ವರದಿ ಮಂಡಿಸಲು ಚರ್ಚೆ ನಡೆಯಲಿದೆ. ರಾಜ್ಯ ಸರ್ಕಾರದ ಈ ನಿರ್ಧಾರ ಕುರಿತಂತೆ ರಾಜ್ಯ ಬಿಜೆಪಿ ಸರಣಿ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದೆ. ಜಾತಿ ಗಣತಿ ದುರ್ಬಳಕೆಯಾಗುತ್ತಿರುವ ಬಗೆ ವಿವರಿಸಿದೆ.

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಗುಡುಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

R Ashok Raise this Question Over Caste Census Discuss at State Cabinet Meeting

ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲ ಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನು ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನು ಏಣಿಯಾಗಿ ಬಳಸಿಕೊಳ್ಳುವುದನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

R Ashok Raise this Question Over Caste Census Discuss at State Cabinet Meeting

ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ 'ಆತ್ಮಸಾಕ್ಷಿ'ಗೆ ಕೆಲವು ಪ್ರಶ್ನೆ ಮುಂದಿಟ್ಟಿದ್ದೇವೆ. ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜಾತಿ ಗಣತಿ ವರದಿ: ಬಿಜೆಪಿ ಪ್ರಶ್ನೆಗಳು ಹೀಗಿವೆ

* ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

* ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ? ಎಂದು ಪ್ರಶ್ನಿಸಿದರು.

* ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾಋ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನೂ ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?

* ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

* ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಾಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನು ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

* ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?

* ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

* ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

ಈ ಕುರಿತು ನಾಳಿನ ಸಚಿವ ಸಂಪುಟ ಸಭೆಗೂ ಮೊದಲೇ ಸಿಎಂ ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ಎಲ್ಲ ಪ್ರಶ್ನೆಗಳಿಗೆ ಅವರು ರಾಜ್ಯದ ಜನತೆ ಎದುರು ಆತ್ಮಸಾಕ್ಷಿಯಿಂದ ಉತ್ತರಿಸುವಂತೆ ಆರ್.ಅಶೋಕ್ ಅವರು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+