"ಸಾಬ್ರಿಗೂ ಎರಡೇ ಮಕ್ಕಳು ಮಾಡಿಕೊಳ್ಳಲಿ ಅಂತ ಸಿದ್ದರಾಮಯ್ಯ ಹೇಳಲಿ ನೋಡೋಣ"

ಮುಸ್ಲಿಮರಿಗೂ ಎರಡೇ ಮಕ್ಕಳು ಮಾಡಿಕೊಳ್ಳಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಆರ್‌ ಅಶೋಕ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಆರ್‌ ಅಶೋಕ್‌ ಅವರು ಈ ರೀತಿ ಹೇಳಿದ್ದು ಯಾಕೆ, ಯಾವ ಸಂದರ್ಭದಲ್ಲಿ ಈ ರೀತಿ ಹೇಳಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಂದೂಗಳು ಎರಡೇ ಮಕ್ಕಳು ಮಾಡಿಕೊಳ್ಳಿ ಅಂತ ಸಲಹೆಯನ್ನು ಕೊಟ್ಟಿದ್ದರು. ಈ ಸಲಹೆಗೆ ಆರ್‌ ಅಶೋಕ್‌ ಅವರು ಗರಂ ಆಗಿದ್ದು. ಮುಖ್ಯಮಂತ್ರಿ ಸಿದರಾಮಯ್ಯ ಅವರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

R Ashok Says Siddaramaiah Should Tell Muslims to Have Only Two Children

ಹಿಂದೂಗಳಿಗೆ ಎರಡೇ ಮಕ್ಕಳು ಮಾಡಿಕೊಳ್ಳಿ ಅಂತ ಸಲಹೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯನ್ನು ಆರ್‌ ಅಶೋಕ್‌ ಅವರು ವಿರೋಧಿಸಿದ್ದಾರೆ. ಸಿದ್ದರಾಮಯ್ಯ ಅವರು ಇದೇ ಮಾತನ್ನು ಹೋಗಿ ಮುಸ್ಲಿಮರಿಗೆ ಹೇಳುತ್ತಾರೆಯೇ. ದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಆಗಬೇಕು. ಮುಸ್ಲಿಮರ ಸಂಖ್ಯೆ ಹೆಚ್ಚಾಗಬೇಕು ಎನ್ನುವ ಸಿದ್ದರಾಮಯ್ಯ ಅವರು ಮಾಡುತ್ತಿರುವ ಕುತಂತ್ರ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮುಂದುವರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಓಲೈಕೆ ರಾಜಕೀಯ ಮಾಡುವುದನ್ನು ಬಿಡಬೇಕು. ಸಿದ್ದರಾಮಯ್ಯ ಅವರು ಈ ರೀತಿ ಮಾಡುತ್ತಿರುವುದರಿಂದಲೇ ಕರ್ನಾಟಲದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಿದ್ದಾರೆ.

ಇನ್ನು ಈಚೆಗೆ ಸ್ವಾಮೀಜಿಗಳು ಹಿಂದೂಗಳು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಾಗ ಅದಕ್ಕೆ ಸಿದ್ದರಾಮಯ್ಯ ಅವರು ಟಾಂಗ್ ಕೊಟ್ಟಿದ್ದರು ಎಂದು ಅವರು ದೂರಿದ್ದಾರೆ.

ಆರ್ಥಿಕತೆ ಕುಂಠಿತ: ತೆರಿಗೆ ಸಂಗ್ರಹ ಖೋತಾ: ಇನ್ನು ರಾಜ್ಯದಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಖೋತಾ ಆಗಿದೆ ಎಂದು ಆರ್‌ ಅಶೋಕ್‌ ಅವರು ದೂರಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡನೆ ಮಾಡುವುದಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. 2024-25ನೇ ಸಾಲಿನ ತೆರಿಗೆ ಸಂಗ್ರಹದಲ್ಲಿ ಇಲ್ಲಿಯವರೆಗೆ ಶೇ 35ರಷ್ಟು ಕೊರತೆ ಎದುರಾಗಿದೆ ಎಂದು ವರದಿ ಹೇಳಿದೆ. ಇದು ಕರ್ನಾಟಕದ ಆರ್ಥಿಕ ಕುಸಿತ ಪರಿಸ್ಥಿತಿಗೆ ಹಿಡಿದಿರುವ ಕನ್ನಡಿಯಾಗಿದೆ ಎಂದು ಅವರು ಹೇಳಿದ್ದಾರೆ.

2024-25ನೇ ಸಾಲಿನಲ್ಲಿ ಬಜೆಟ್‌ನ ಅನ್ವಯ ತೆರಿಗೆ ಸಂಗ್ರಹದ ಗುರಿ 1,87,525 ಕೋಟಿ ರೂಪಾಯಿ ಹಾಕಿಕೊಳ್ಳಲಾಗಿತ್ತು. ಆದರೆ, ಡಿಸೆಂಬರ್ ವರೆಗೆ ಕೇವಲ 1,25,101 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಅದಂರೆ ಶೇ 35 ತೆರಿಗೆ ಸಂಗ್ರಹ ಕುಂಠಿತವಾಗಿದೆ ಎಂದರ್ಥ. ಇನ್ನು ಸ್ವಯಂಘೋಷಿತ ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಾಣಿಜ್ಯ ತೆರಿಗೆ, ಅಬಕಾರಿ ತೆರಿಗೆ, ನೋಂದಣಿ ಹಾಗೂ ದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಈ ಎಲ್ಲ ನಾಲ್ಕು ಮೂಲಗಳಿಂದಲೂ ಆದಾಯ ಕೊರತೆಯಾಗಿದೆಯಲ್ಲ ಇದಕ್ಕೆ ಕಾರಣವೇನು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+