ಗೂಂಡಾ ರಾಜ್ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ: ಆರ್ ಅಶೋಕ್ ವಾಗ್ದಾಳಿ

ಬೆಂಗಳೂರು: ಗೂಂಡಾ ರಾಜ್ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅತ್ತ ಸಿಎಂ ಸಿದ್ದರಾಮಯ್ಯ ನವರು ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡುವ ಕನಸು ಕಾಣುತ್ತ ಔತಣಕೂಟ, ಸಮಾವೇಶ ಎಂದು ಸಂಭ್ರಮ ಪಡುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದಲ್ಲಿ ಗುಂಡಾರಾಜ್ಯದ ಗದ್ದಲ ಸದ್ದು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರತಾಗಿ ಟ್ವೀಟ್ ಮಾಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು, ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮೇಲೆ ಕೊಲೆ ಯತ್ನವಾಗಿದೆ. ಯಲ್ಲಾಪುರದಲ್ಲಿ ಹಿಂದೂ ಹುಡುಗಿಯ ಹತ್ಯೆಯಾಗಿದೆ. ಬೆಂಗಳೂರಿನಲ್ಲಿ ಓಂಶಕ್ತಿ ಭಕ್ತರ ಮೆರವಣಿಗೆ ಮೇಲೆ ಕಲ್ಲು ತೂರಾಟ, ಅಮಾಯಕ ಮಹಿಳೆಯರು-ಮಕ್ಕಳಿಗೆ ಗಾಯವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಕಿಡಿಕಾರಿದರು.

R Ashok scathing attack calling Goonda Raj the 6th guarantee of the Congress Karnataka

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣದಿಂದಾಗಿ ಮತಾಂಧ ದುಷ್ಕರ್ಮಿಗಳ, ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸ ಮಿತಿ ಮೀರಿದೆ. ಬಹುಸಂಖ್ಯಾತರ ಧಾರ್ಮಿಕ ಆಚರಣೆಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಜನಸಾಮಾನ್ಯರಿಗೆ ನೆಮ್ಮದಿ ಇಲ್ಲದಂತಾಗಿದೆ. ಇಷ್ಟಾದರೂ ಕಾಂಗ್ರೆಸ್ ಸರಕಾರದ ಮೌನ ಮತ್ತು ನಿರ್ಲಕ್ಷ್ಯ ನಾಚಿಕೆಗೇಡು. ದ್ವೇಷ ಕೃತ್ಯ ಎಸಗುತ್ತಿರುವ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+