"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ''
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮುಗಿದು ಐದು ತಿಂಗಳು ಕಳೆಯಿತು. ಈ ಹಬ್ಬದ ಆಚರನೆಗಾಗಿ ಖರ್ಚು ಮಾಡಿದ 30 ಕೋಟಿ ರೂಪಾಯಿಗಳ ಲೆಕ್ಕ ನೀಡಲು ಈ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರೆ ಇದರರ್ಥವೇನು?. ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ಇನ್ನೈದಾರು ತಿಂಗಳು ಕಳೆದರೆ ಪ್ರಸಕ್ತ ವರ್ಷ 2026ರ ಮೈಸೂರು ದಸರಾ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ 2025ರ ಮೈಸೂರು ದಸರಾಗಾಗಿ ಮಾಡಿದ್ದ ಖರ್ಚು-ವೆಚ್ಚಗಳ ಬಗ್ಗೆ ಜಿಲ್ಲಾಡಳಿತದ ಬಳಿ ಸರಿಯಾದ ಉತ್ತರವಿಲ್ಲ. ಈ ವಿಳಂಬ, ಹಿಂಜರಿಕೆ ನೋಡಿದರೆ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಎರಡು ತಿಂಗಳಲ್ಲಿ ನೀಡಬೇಕಿದ್ದ ಲೆಕ್ಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದಸರಾ ಹಬ್ಬದ ಲೆಕ್ಕ ಖರ್ಚು ವೆಚ್ಚದ ಕೊಡಲು ಇಷ್ಟು ಹಿಂಜರಿಕೆ ಏಕೆ? ಈ ಹಿಂದೆ ದಸರಾ ಮುಗಿದ ಒಂದೆರಡು ತಿಂಗಳಲ್ಲಿ ಲೆಕ್ಕ ನೀಡಲಾಗುತ್ತಿತ್ತು. ಈಗ 5 ತಿಂಗಳಾದರೂ ಅಧಿಕಾರಿಗಳು ಇನ್ನೂ "ಲೆಕ್ಕ ಹಾಕುತ್ತಿದ್ದೇವೆ" ಎಂಬ ಕುಂಟು ನೆಪ ಹೇಳುತ್ತಿದ್ದೀರಿ. ಈ ಮೂಲಕ ಯಾರನ್ನು ರಕ್ಷಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
5 ಲಕ್ಷದ ಒಪ್ಪಂದ ಮಾಡಿಕೊಂಡು ಕೇವಲ 1.95 ಲಕ್ಷ ನೀಡಿ ಕಲಾವಿದರನ್ನು ಬೀದಿಗೆ ತಳ್ಳುತ್ತಿರುವುದು ಸರಿಯೇ? ಕಲಾವಿದರ ಶ್ರಮದ ಹಣದಲ್ಲಿ "ಕಮಿಷನ್" ಆಟ ನಡೆಯುತ್ತಿದೆಯೇ? ಸಾರ್ವಜನಿಕ ಹಣಕ್ಕೆ ಹೊಣೆಗಾರಿಕೆ ಇಲ್ಲವೇ? ಜನರ ತೆರಿಗೆ ಹಣ 30 ಕೋಟಿ ರೂಪಾಯಿಗಳ ಲೆಕ್ಕವನ್ನು ಬಹಿರಂಗಪಡಿಸಲು ಸರ್ಕಾರಕ್ಕೆ ಯಾಕೆ ಭಯ? ಎಂದು ಕಿಡಿ ಕಾರಿದರು.
ಮೈಸೂರು ದಸರಾ ಕೇವಲ ಹಬ್ಬವಲ್ಲ, ಅದು ನಮ್ಮ ನಾಡಿನ ಸಾಂಸ್ಕೃತಿಕ ಹೆಮ್ಮೆ. ಅದನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಬೇಡಿ. ಸರ್ಕಾರ ಕೂಡಲೇ ಪಾರದರ್ಶಕವಾಗಿ ಪೂರ್ಣ ಲೆಕ್ಕವನ್ನು ಸಾರ್ವಜನಿಕರ ಮುಂದೆ ಇಡಬೇಕು ಮತ್ತು ಬಾಕಿ ಇರುವ ಕಲಾವಿದರ ಸಂಭಾವನೆಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೇತನ ಸಿಗದೇ ಗ್ರಂಥಾಪಾಲಕಿ ಸಾವು
ಕಳೆದ ಅಕ್ಟೋಬರ್ ನಲ್ಲಿ ಸಕಾಲಕ್ಕೆ ವೇತನ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ವ್ಯವಸ್ಥೆಗೆ ಬೇಸತ್ತು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರು
ನೇಣಿಗೆ ಶರಣಾಗಿದ್ದರು. ಇಂತಹ ಹೃದಯವಿದ್ರಾವಕ ಘಟನೆ ನಡೆದ ಮೇಲೂ ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಕಳೆದ 16 ತಿಂಗಳಿಂದ 5,884 ಗ್ರಂಥಪಾಲಕರಿಗೆ ಪೂರ್ಣ ವೇತನ ನೀಡದೆ ಅವರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದೆ ಎಂದು ಅವರು ಟೀಕಿಸಿದರು.
ಸಿದ್ದರಾಮಯ್ಯನವರೇ ತಮ್ಮ ಪಾಪರ್ ಸರ್ಕಾರದ ದಿವಾಳಿತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಸ್ವಾಮಿ?/ ಈ ಕೊಡಲೇ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಬಾಕಿ ವೇತನ ಬಿಡುಗಡೆ ಮಾಡಿ. ಇನ್ನು ಮುಂದೆ ಸಕಾಲಕ್ಕೆ ಪೂರ್ತಿ ಸಂಬಳ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications