ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ
ಬೆಂಗಳೂರು: ನಗರದ ಯಲಹಂಕ ಕೋಗಿಲು ಬಡಾವಣೆ ಅಕ್ರಮ ವಲಸಿಗರ ವಿಚಾರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದರು. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರ ವ್ಯಾಪಕ ಚರ್ಚೆಗೆ, ವಿಪಕ್ಷ ನಾಯಕರ ಟೀಕೆಗೆ ಗುರಿಯಾಗಿತ್ತು. ಇದೀಗ ಕೇರಳ ಚುನಾವಣೆ ಹೊತ್ತಿನಲ್ಲಿ ಆ ರಾಜ್ಯದ ಲೋಕಸಭಾ ಕ್ಷೇತ್ರವೊಮದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿದ್ದು ಖಂಡನೀಯ ಎಂದು ವಿಪಕ್ಷ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಕರ್ನಾಟಕದ ಸಮಸ್ಯೆಗೆ ಕಿವಿ ಕೊಡಿ ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರಿಗೆ ಅಭಿನಂದನೆಗಳು' ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ನೀವು ಕರ್ನಾಟಕದ ಸಿಎಂ ಅಲ್ಲ, ಕೇರಳದ ಮುಖ್ಯಮಂತ್ರಿ ಎಂದು ಎಕ್ಸ್ ಪೊಸ್ಟ್ ಮಾಡಿ ಅವರು ಲೇವಡಿ ಮಾಡಿದ್ದಾರೆ.

ರಾಜ್ಯದ ಕನ್ನಡಿಗರು ನತದೃಷ್ಟರು
ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ಆದರೆ ನತದೃಷ್ಟ ಕನ್ನಡಿಗರು ಕೇರಳಂನವರಷ್ಟು ಅದೃಷ್ಟವಂತರಲ್ಲ ಬಿಡಿ! ಎಂದು ಸಿಎಂ ಸಿದ್ದರಾಮಯ್ಯರ ಅನುದಾನ ನಿರ್ಧಾರವನ್ನು ಖಂಡಿಸಿದ್ದಾರೆ.
2025-26ನೇ ಕಳೆದ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂಪಾಯಿ ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಉಂಟಾದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಅವರು ವಿವರಿಸಿದರು.
ಕರ್ನಾಕಟದ ಸಮಸ್ಯೆಗಳತ್ತ ಗಮನ ಕೊಡಿ
ಒಂದು ಕಡೆ ನಮ್ಮದೇ ರಾಜ್ಯದಲ್ಲಿ ಕಸ ವಿಲೇವಾರಿ ಮಾಡುವ ಸಂಸ್ಥೆಗಳಿಗೆ, ಸರ್ಕಾರಿ ನೌಕರರ ಸಂಬಳಕ್ಕೆ, ಗುತ್ತಿದೆಗಾರರ ಬಾಕಿ ಪಾವತಿ ಮಾಡಲು ಹಣವಿಲ್ಲ. ಸರ್ಕಾರಿ ಶಾಲೆಗಳ ದುರಸ್ತಿಗೆ, ಸರಿಯಾದ ಸಮಯಕ್ಕೆ ಮಕ್ಕಳ ಪಠ್ಯಪುಸ್ತಕ, ಯುನಿಫಾರ್ಮ್, ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ದುಡ್ಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳ ಬಿಲ್ ಪಾವತಿಗೆ ಹಣವಿಲ್ಲ. ಶಾಸಕರಿಗೆ ಕ್ಷೇತ್ರದ ಯೋಜನೆ ಮತ್ತು ಅಭಿವೃದ್ಧಿಗೆ ಅನುದಾನವಿಲ್ಲ.

ರಾಜ್ಯದ ಹಣಕಾಸು ಪರಿಸ್ಥಿತಿಯೇ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ, ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಲಜ್ಜತೆ, ಭಂಡತನಕ್ಕೆ ಅವರೇ ಸಾಟಿ ಎಂದು ಅವರು ವಾಗ್ದಾಳಿ ನಡೆಸಿದರು.
ಕೇರಳ ರಾಜಕೀಯಕ್ಕೆ ತುಪ್ಪ ಸುರಿದ ಸಿದ್ದರಾಮಯ್ಯ
ಕನ್ನಡಿಗರ ರಕ್ತ ಹೀರಿ ಬೇರೆ ರಾಜ್ಯದ ರಾಜಕೀಯಕ್ಕೆ ತುಪ್ಪ ಸುರಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾನ-ಮರ್ಯಾದೆ ಇದೆಯೇ ಎಂಬುದು ಸಮಸ್ತ ಕನ್ನಡಿಗರ ಪ್ರಶ್ನೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ, ರಸ್ತೆಗಳಲ್ಲಿ ಗುಂಡಿ ಬಿದ್ದಿವೆ, ರೈತರು ಸಾಲಬಾಧೆಯಿಂದ ಸಾಯುತ್ತಿದ್ದಾರೆ. ಆದರೂ ಕೇರಳಂ ಚುನಾವಣಾ ಗಿಮಿಕ್‌ಗಾಗಿ, ಕನ್ನಡಿಗರ ಕೋಟಿ ಕೋಟಿ ಹಣ ಸುರಿಯಲು ನಿಮಗೆ ಯಾವ ನೈತಿಕತೆ ಇದೆ? ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಲ್ಲದೆ ಮತ್ತೇನು? ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.
ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ.
— BJP Karnataka (@BJP4Karnataka) March 24, 2026
ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್… pic.twitter.com/2hedoDNHIm
ನನ್ನ ತೆರಿಗೆ ನನ್ನ ಹಕ್ಕು ಎಂದಿದ್ದ ಸಿದ್ದರಾಮಯ್ಯ!
ಕರ್ನಾಟಕ ಸರ್ಕಾರವು ಪೂರಕ ಅಂದಾಜುಗಳನ್ನು ಮಂಡಿಸಿದೆ, ಇದರಲ್ಲಿ ಕೇರಳ ಚುನಾವಣೆ ಹೊತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ವಯನಾಡಿಗೆ 10 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಸಿಎಂ ಸಿದ್ದರಾಮಯ್ಯ ಅವರು ಒದಗಿಸಿದ್ದಾರೆ. "ನನ್ನ ತೆರಿಗೆ, ನನ್ನ ಹಕ್ಕು" ಎಂದು ಗುಡುಗಿದ್ದ ಇದೇ ಸಿದ್ದರಾಮಯ್ಯ ಅವರು ಈಗ ತನ್ನ ಸ್ವಂತ ಕುರ್ಚಿಯನ್ನು ಉಳಿಸಿಕೊಳ್ಳಲು ಬೇರೆ ರಾಜ್ಯದ ಮತದಾರರಿಗೆ ಚೆಕ್ ಬರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications