ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸ್ಪೀಕರ್

By Gururaj
|
Google Oneindia Kannada News

ಬೆಂಗಳೂರು, ಮೇ 22 : ಜೆಡಿಎಸ್ ಮತ್ತು ಕಾಂಗ್ರೆಸ್ ಸ್ಪೀಕರ್ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬಂದಿವೆ. ಆರ್.ರಮೇಶ್ ಕುಮಾರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಲಿದ್ದಾರೆ.

ಮಂಗಳವಾರ ಸಂಜೆ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಬುಧವಾರದ ಪ್ರಮಾಣ ವಚನ ಸಮಾರಂಭ, ಸ್ಪೀಕರ್ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.

ಕಾಂಗ್ರೆಸ್ - ಜೆಡಿಎಸ್ ಅಧಿಕಾರ ಹಂಚಿಕೆ ಅಂತಿಮ, 'ಕೈ'ಗೆ ಸಿಂಹ ಪಾಲುಕಾಂಗ್ರೆಸ್ - ಜೆಡಿಎಸ್ ಅಧಿಕಾರ ಹಂಚಿಕೆ ಅಂತಿಮ, 'ಕೈ'ಗೆ ಸಿಂಹ ಪಾಲು

ಸಭೆಯ ಬಳಿಕ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, 'ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್‌ ಇಟ್ಟುಕೊಂಡಿದೆ. ಡೆಪ್ಯೂಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ' ಎಂದರು.

R Ramesh Kumar to be Karnataka assembly speaker

ಮಾಜಿ ಸಚಿವ, ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸ್ಪೀಕರ್‌ ಆಗಿ ಆಯ್ಕೆಯಾಗಲಿದ್ದಾರೆ. ಈಗಾಗಲೇ ರಮೇಶ್ ಕುಮಾರ್ ಅವರಿಗೆ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದ ಅನುಭವಿದೆ.

ಬುಧವಾರ ಪರಮೇಶ್ವರ್, ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನಬುಧವಾರ ಪರಮೇಶ್ವರ್, ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನ

ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಅವರ ಜೊತೆ ಡಾ.ಜಿ.ಪರಮೇಶ್ವರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

English summary
Congress and JD(S) finally come to conclusion in the issue of electing speaker to Karnataka assembly. Congress MLA and Former minister R.Ramesh Kumar to be next speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X