ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಹಿ ಸುದ್ದಿ

ಬೆಂಗಳೂರು, ಫೆಬ್ರವರಿ 20 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಹಿ ಸುದ್ದಿ. ಪರೀಕ್ಷೆ ಸಿದ್ಧತೆ ಬಗ್ಗೆ ಪ್ರಸಾರವಾಗುತ್ತಿದ್ದ ರೇಡಿಯೊ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಸುಧಾರಿಸಲು ಮಧ್ಯಾಹ್ನ 2.30 ರಿಂದ 3 ಗಂಟೆಯ ತನಕ ಪರೀಕ್ಷೆ ಸಿದ್ಧತೆ ಕುರಿತು ರೇಡಿಯೊ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿತ್ತು. ಶಾಲೆಗಳಲ್ಲಿ ರೇಡಿಯೊ ಸೆಟ್ ಮೂಲಕ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಕೇಳಿಸಿಕೊಳ್ಳುತ್ತಿದ್ದರು.

ಪ್ರತಿ ವರ್ಷ ಜನವರಿಯಿಂದ ಮಾರ್ಚ್ ತನಕ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. ಕಾರ್ಯಕ್ರಮ ಸ್ಥಗಿತಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ನಷ್ಟವಾಗುತ್ತದೆ. ಆದರೆ, ಆಕಾಶವಾಣಿಗೆ ಯಾವುದೇ ನಷ್ಟ ಆಗುವುದಿಲ್ಲ.

Radio Coaching Program For SSLC Students Stopped

ಸರಿಯಾಗಿ ವಿದ್ಯುತ್ ಸಂಪರ್ಕವಿಲ್ಲದ ಹಳ್ಳಿಗಳಲ್ಲಿ ರೇಡಿಯೊ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಸಿದ್ಧತೆ ಕಾರ್ಯಕ್ರಮ ಕೇಳುತ್ತಿದ್ದರು. ತಮಗೆ ಇದ್ದ ಅನುಮಾನಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಆದರೆ, ಈಗ ಕಾರ್ಯಕ್ರಮ ರದ್ದಾಗಿದೆ.

ರೇಡಿಯೊ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಯೂಟ್ಯೂಬ್ ಮೂಲಕ ಪ್ರಸಾರ ಮಾಡಲು ಈ ವರ್ಷ ಸಿದ್ಧತೆ ನಡೆದಿತ್ತು. ಈ ಬಾರಿ ಯೂಟ್ಯೂಬ್ ಮೂಲಕ ಪ್ರಸಾರಕ್ಕೆ ಒಪ್ಪಿಗೆ ಸಿಗದ ಕಾರಣ ರೇಡಿಯೊ, ಯೂಟ್ಯೂಟ್ ಎರಡೂ ಕಾರ್ಯಕ್ರ ಇಲ್ಲವಾಗಿದೆ.

ಕರ್ನಾಟಕದ 14 ಆಕಾಶವಾಣಿ ಕೇಂದ್ರದಿಂದ ಏಕಕಾಲದಲ್ಲಿ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. ವಿದ್ಯಾರ್ಥಿಗಳು ಕಾರ್ಯಕ್ರಮ ಕೇಳಲು ಅನುಕೂಲವಾಗುವಂತೆ ಶಾಲೆಗಳಲ್ಲಿ ರೇಡಿಯೊ ಸೆಟ್ ಖರೀದಿ ಮಾಡಲಾಗಿತ್ತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರು ಸಹ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸಹಯೋಗದಲ್ಲಿ ಶಿಕ್ಷಣ ಇಲಾಖೆ ಮತ್ತು ಆಕಾಶವಾಣಿ ಜಂಟಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದವು.

ಮಾರ್ಚ್ 27ರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಲಿದ್ದು ವಿದ್ಯಾರ್ಥಿಗಳು ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+