ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

#RaGaFromKarnataka ಕಾಂಗ್ರೆಸ್‌ ನಾಯಕರಿಂದ ಟ್ವಿಟರ್ ಅಭಿಯಾನ

|
Google Oneindia Kannada News

ಬೆಂಗಳೂರು, ಮಾರ್ಚ್ 15 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆಯೇ?. ಟ್ವಿಟರ್‌ನಲ್ಲಿ ಕರ್ನಾಟಕದ ಕಾಂಗ್ರೆಸ್‌ ನಾಯಕರು ಈ ಕುರಿತು ಅಭಿಯಾನ ಆರಂಭಿಸಿದ್ದಾರೆ.

ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಸಂಸದರು. ಈ ಬಾರಿಯ ಚುನಾವಣೆಯಲ್ಲಿಯೂ ಅವರು ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. ಆದರೆ, ಅವರು ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕರಾಹುಲ್ ಗಾಂಧಿ ದಕ್ಷಿಣದಿಂದ ಸ್ಪರ್ಧೆ? ಮೊದಲ ಆಯ್ಕೆ ಕರ್ನಾಟಕ

#RaGaFromKarnataka ಎಂಬ ಹ್ಯಾಷ್‌ ಟ್ಯಾಗ್ ಬಳಸಿ ರಾಜ್ಯದ ಕಾಂಗ್ರೆಸ್ ನಾಯಕರು ಟ್ವೀಟ್‌ಗಳನ್ನು ಮಾಡಿ ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡಲು ಬೆಂಬಲ ಸೂಚಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಾ ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಲೋಕಸಭಾ ಚುನಾವಣೆಯನ್ನೂ ಮೈತ್ರಿ ಮಾಡಿಕೊಂಡು ಎರಡೂ ಪಕ್ಷಗಳು ಎದುರಿಸುತ್ತಿವೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, 20ರಲ್ಲಿ ಕಾಂಗ್ರೆಸ್‌, 8 ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕಿಳಿಯಲಿವೆ.....

20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಸಿದ್ದರಾಮಯ್ಯ ಬೆಂಬಲ

ಕರ್ನಾಟಕ ಯಾವಾಗಲೂ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿದೆ. ಇದು ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಟ್ವೀಟ್

ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪರವಾಗಿ ಒತ್ತಾಯಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವರ ಟ್ವೀಟ್

1978ರಲ್ಲಿ ಇಂದಿರಾ ಗಾಂಧಿ, 1999ರಲ್ಲಿ ಸೋನಿಯಾ ಗಾಂಧಿ, 2019ರಲ್ಲಿ ರಾಹುಲ್ ಗಾಂಧಿ ಎಂದು ಮಾಜಿ ಸಚಿವ ರೋಷನ್ ಬೇಗ್ ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಇತಿಹಾಸ ಪುನರ್ ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಒತ್ತಡ

ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಅವರು ಸಹ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರ ಒತ್ತಡವಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಹೆಮ್ಮೆ ಪಡಲಿದೆ

ನಮ್ಮ ಮುಂದಿನ ಪ್ರಧಾನ ಕರ್ನಾಟಕದಿಂದ ಸ್ಪರ್ಧಿಸಿದರೆ ರಾಜ್ಯ ಹೆಮ್ಮೆ ಪಡೆಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ರಾಜ್ಯ ರಾಜಕೀಯ ಮರುಜನ್ಮ ನೀಡಿದೆ

ಕರ್ನಾಟಕ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದೆ. ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಗೆದ್ದಿದ್ದರು. ರಾಹುಲ್ ಗಾಂಧಿ ಅವರು ಚುನಾವಣೆಗೆ ನಿಲ್ಲುವ ಮೂಲಕ ಸಂಬಂಧ ಉಳಿಸಬೇಕು ಎಂದು ದಿನೇಶ್ ಗುಂಡೂರಾವ್ ಪತ್ನಿ ತಬು ಟ್ವೀಟ್ ಮಾಡಿದ್ದಾರೆ.

ಯುವ ಕಾಂಗ್ರೆಸ್‌ನಿಂದ ಸ್ವಾಗತ

ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂದು ಯುವ ಕಾಂಗ್ರೆಸ್ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದೆ. ಉತ್ತರ ಮತ್ತು ದಕ್ಷಿಣದ ನಡುವಿನ ಅಂತರ ಮರೆಯಾಗಲು ರಾಹುಲ್ ಗಾಂಧಿಯಂತಹ ನಾಯಕರು ಬೇಕು ಎಂದು ಹೇಳಿದೆ.

ಗೃಹ ಸಚಿವರ ಟ್ವೀಟ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯುವಕರು, ರೈತರು, ಮೀನುಗಾರರು, ಬುಡಕಟ್ಟು ಜನರಿಗೆ ಹೊಸ ಚಿಂತನೆಯನ್ನು ನೀಡುತ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಜನರು ಸ್ವಾಗತಿಸಲು ಕಾತರರಾಗಿದ್ದಾರೆ

ಕರ್ನಾಟಕದಿಂದ ಲೋಕಸಭೆಗೆ ರಾಹುಲ್ ಗಾಂಧಿ. ರಾಜ್ಯದ ಜನರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಕಾತರರಾಗಿದ್ದಾರೆ.

ಬೆಂಗಳೂರಿನಿಂದ ಕಣಕ್ಕಿಳಿಯಲಿ

ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಲಾಗಿದೆ.

English summary
AICC president Rahul Gandhi should contest for 2019 Lok sabha elections from Karnataka. #RaGaFromKarnataka campaign in twitter from party leaders. Rahul Gandhi sitting MP of Amethi lok sabha seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X