'ನಂದಿನಿ ಹಾಲಿನ ದರ ಹೆಚ್ಚಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ'
ಬೆಂಗಳೂರು, ಸೆಪ್ಟೆಂಬರ್ 14 ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ; ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿಯ ಹಾಲು ಪ್ರಕೋಷ್ಟದ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಹಾಲು ಪ್ರಕೋಷ್ಟದ ರಾಜ್ಯ ಸಂಚಾಲಕ ರಾಘವೆಂದ್ರ ಶೆಟ್ಟಿ ಅವರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿನ್ನೆ ಮಾಗಡಿಯಲ್ಲಿ ಸಹಕಾರ ಸಚಿವರಿಗೆ ಹಾಲಿನ ದರ ಏರಿಕೆ ಮಾಡುವಂತೆ ಸೂಚಿಸಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನತೆ ನೀರು, ವಿದ್ಯುತ್, ಮನೆ ಬಾಡಿಗೆ ಸೇರಿದಂತೆ ಅನೇಕ ದರ ಏರಿಕೆಯ ಆಘಾತದೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ ಎಂದಿರುವ ಅವರು, ರಾಜ್ಯ ಸರ್ಕಾರವು ಮೊದಲು ರೈತರ ಹಾಲಿನ ಸಬ್ಸಿಡಿ ಹಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ನಂದಿನಿಯ ಎಲ್ಲ ಮಾದರಿಯ ಹಾಲಿನ ದರ ಕಳೆದ ಜೂನ್‍ನಲ್ಲೇ ಪ್ರತಿ ಲೀಟರ್‍ಗೆ 2 ರೂ 10 ಪೈಸೆಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಟೋನ್ಡ್ ಹಾಲು 42 ರಿಂದ 44 ಕ್ಕೆ, ಸಮೃದ್ಧಿ ಹಾಲು 51 ರಿಂದ 53, ಶುಭಂ ಹಾಲು 48 ರಿಂದ 50 ಹೀಗೆ ಎಲ್ಲ ಮಾದರಿಯ ಹಾಲಿನ ದರ ಏರಿಕೆ ಮಾಡಿದ್ದಾರೆ. ರಾಜ್ಯದ ಜನತೆ ನಮಗೆ 50 ಎಂ.ಎಲ್ ಹೆಚ್ಚಿಗೆ ಬೇಕೆಂದು ಯಾರು ಕೇಳಿರಲಿಲ್ಲ, ಆದರೂ ರಾಜ್ಯ ಸರ್ಕಾರ ಮೊಂಡುತನದಿಂದ, ಭಂಡತನದಿಂದ ನಾವು ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ, 50 ಎಂ.ಎಲ್ ಹೆಚ್ಚಳ ನೀಡಿದ್ದೇವೆಂದು ರಾಜ್ಯದ ಹಾಗೂ ಬೆಂಗಳೂರು ನಗರದ ಜನತೆಗೆ ಮಕ್ಮಲ್ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ರಾಜ್ಯದ ರೈತರ ಹೆಸರಿನಲ್ಲಿ, ರಾಜ್ಯದ ಜನತೆಯ ಮರ್ಜಿ ಕಾಯದೇ ಈಗ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಸೂಚಿಸಿರುವುದು ಸರಿಯಲ್ಲ. ಈಗಾಗಲೇ ರಾಜ್ಯ ಸರ್ಕಾರ ಮತ್ತು ಕೆ.ಎಂ.ಎಫ್ ಹಾಲು ಉತ್ಪಾದಕರಿಗೆ ಸಬ್ಸಿಡಿಯ ಅಂದಾಜು 865 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಮಾಹಿತಿಯಿದೆ. ಮೊದಲು ತಾವು ರೈತರಿಗೆ ನೀಡಬೇಕಾದ ಹಾಲಿನ ಸಬ್ಸಿಡಿ ಪೆÇ್ರೀತ್ಸಾಹಧನ ಬಿಡುಗಡೆಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ರಾಜ್ಯ ಸರ್ಕಾರ ಹೇಗೆ ರೈತರಿಗೆ ಪಂಗನಾಮ ಹಾಕುತ್ತದೆಯೆಂದರೆ 100 ಲೀಟರ್ ಹಾಲನ್ನು ಹಾಲಿನ ಕೇಂದ್ರಗಳಿಗೆ ರೈತರು ನೀಡಿದರೆ ಅದರಲ್ಲಿ ಕೇವಲ 40 ಲೀಟರ್‍ಗೆ ಮಾತ್ರ ಪ್ರೋತ್ಸಾಹದ ಸಬ್ಸಿಡಿ ಹಣ ನೀಡುತ್ತದೆ. ಇದರಲ್ಲಿ ಗುಡ್ ಮಿಲ್ಕ್, ಫ್ಯಾಟ್ ಮಿಲ್ಕ್ ಎಂದು ಹೇಳಿ ಇದರಲ್ಲಿ ಹಾಲಿನ ಗುಣಮಟ್ಟ ಕಡಿಮೆಯಿದೆ ಎಂದು ಹೇಳಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ, ನಾವು ಅಧಿಕಾರಕ್ಕೆ ಬಂದರೆ ಒಂದು ಲೀಟರ್ ಹಾಲಿನ ಸಬ್ಸಿಡಿ ಹಣವನ್ನು 7 ರೂಪಾಯಿಗೆ ಹೆಚ್ಚಿಸುತ್ತೇವೆಂದು ಹೇಳಿದ್ದರು. ಈಗ ಅಧಿಕಾರಕ್ಕೆ ಬಂದು 1 ವರ್ಷವಾದರೂ ಈ ಬಗ್ಗೆ ಗಮನ ಹರಿಸಿಲ್ಲ, ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಮೊದಲು ಇದನ್ನು ನೆನಪು ಮಾಡಿಕೊಂಡು ಜಾರಿಗೊಳಿಸಲು ಮುಂದಾಗಬೇಕು. ಗೋವಿನ ಆಹಾರವಾದ ಹಿಂಡಿ, ಬೂಸಾಗಳ ಬೆಲೆ ಗಗನಕ್ಕೇರಿದೆ. ಮೇವೂ ಸಹ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಹೈನುಗಾರಿಕೆ ನಷ್ಟದಲ್ಲಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications