• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಘವೇಶ್ವರ ಶ್ರೀಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

|

ಬೆಂಗಳೂರು, ಸೆಪ್ಟೆಂಬರ್ 26 : ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಶನಿವಾರ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಗಾಯಕಿ ಪ್ರೇಮಲತಾ ದಿವಾಕರ್ ಅವರ ಮೇಲೆ ಶ್ರೀಗಳು ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಕುರಿತು ಸಿಐಡಿ 680 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಆರೋಪದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಶನಿವಾರ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಡಿವೈಎಸ್ಪಿ ಅಶೋಕ್ ಕುಮಾರ್ ಅವರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. [ಮಹಿಳಾ ಆಯೋಗಕ್ಕೆ ಮಠದ 12 ಪ್ರಶ್ನೆಗಳು]

ramachandrapura math

4 ಸಂಪುಟಗಳ ಚಾರ್ಜ್‌ಶೀಟ್‌ನಲ್ಲಿ 151 ಸಾಕ್ಷಿಗಳ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಯಲ್ಲಿ ಪ್ರೇಮಲತಾ ದಿವಾಕರ್ ಅವರ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ. 2014ರ ಜೂನ್‌ನಲ್ಲಿ ಬೆಂಗಳೂರಿನ ಗಿರಿನಗರದಲ್ಲಿರುವ ಮಠದಲ್ಲಿಯೂ ಅತ್ಯಾಚಾರ ನಡೆಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. [ಅತ್ಯಾಚಾರ ಪ್ರಕರಣ : ಶ್ರೀಗಳ ಪರ ವಕೀಲರು ಹೇಳುವುದೇನು?]

ಐಪಿಸಿ ಸೆಕ್ಷನ್ 376(2), 508ರ ಅಡಿ 680 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. 151 ಸಾಕ್ಷಿಗಳ ಹೇಳಿಕೆ, ಸಾಕ್ಷಾಧಾರಗಳು ಸೇರಿ ಒಟ್ಟು 1,341 ಪುಟಗಳಿವೆ. ರಾಮಕಥಾ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮುಂಬೈ, ಕೋಲ್ಕತ್ತಾ, ಜೋಧ್‌ಪುರದಲ್ಲಿಯೂ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರ್ಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಸ್ವಾಮೀಜಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಸಿಐಡಿ ನೋಟಿಸ್ ಅನ್ವಯ ಶ್ರೀಗಳು ಸೆ.30ರಂದು ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಹಾಜರಾಗಬೇಕಾಗಿದೆ. ಆದರೆ, ಶ್ರೀಗಳು ಈ ನೋಟಿಸ್‌ಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸೆ.29ಕ್ಕೆ ವಿಚಾರಣೆ ಮುಂದೂಡಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ramachandrapura math ಸುದ್ದಿಗಳುView All

English summary
The Criminal Investigation Department (CID) who were probing rape case against Ramachandrapura math Raghaveshwara Swamiji submitted the charge-sheet to 1st Additional Chief Metropolitan Magistrate court Bengaluru on Saturday, September 26.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more