ಒಂದುವಾರ ಶ್ರೀಗಳ ವೈದ್ಯಕೀಯ ಪರೀಕ್ಷೆ ಇಲ್ಲ?

ಬೆಂಗಳೂರು, ಡಿ. 4 : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಒಂದು ವಾರದ ಕಾಲಾವಕಾಶ ಬೇಕೆಂದು ಸಿಐಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಇಂದು ಶ್ರೀಗಳು ಪರೀಕ್ಷೆಗೆ ಹಾಜರಾಗಬೇಕಿತ್ತು.

ಬುಧವಾರ ಕರ್ನಾಟಕ ಹೈಕೋರ್ಟ್‌ ರಾಘವೇಶ್ವರ ಶ್ರೀಗಳ ವೈದ್ಯಕೀಯ ಪರೀಕ್ಷೆ ಆಗಲೇಬೇಕು ಎಂದು ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಖಾಲಿ ಹೊಟ್ಟೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು ಎಂದು ಸಿಐಡಿ ಪೊಲೀಸರು, ಶ್ರೀಗಳಿಗೆ ನೋಟಿಸ್ ನೀಡಿದ್ದರು. [ಶ್ರೀಗಳಿಗೆ ಪರೀಕ್ಷೆ ಆಗಲೇಬೇಕು]

Raghaveshwara Swamiji

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಸಕಲ ಸಿದ್ಧತೆ ನಡೆದಿತ್ತು. ಪೊಲೀಸರು ಆಸ್ಪತ್ರೆಯಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಸಿಐಡಿ ಅಧಿಕಾರಿಗಳು ಬೆಳಗ್ಗೆ 8 ಗಂಟೆಗೆ ಆಗಮಿಸಿದ್ದರು. [ಪುರುಷತ್ವ ಪರೀಕ್ಷೆ ಎಂದರೇನು?]

ಆದರೆ, ರಾಘವೇಶ್ವರ ಶ್ರೀಗಳು ಇಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗಿಲ್ಲ. ವೈದ್ಯಕೀಯ ಪರೀಕ್ಷೆ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ಪ್ರತಿ ನಮಗೆ ಇನ್ನೂ ತಲುಪಿಲ್ಲ. ಆದ್ದರಿಂದ ಒಂದು ವಾರಗಳ ಕಾಲಾವಕಾಶ ನೀಡುವಂತೆ ಶ್ರೀಗಳು ಸಿಐಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರೀ ಅವರ ಬಟ್ಟೆಯಲ್ಲಿ ವೀರ್ಯ ಪತ್ತೆಯಾಗಿತ್ತು. ಅದು ಯಾರದ್ದು? ಎಂದು ತಿಳಿಯಲು ಸಿಐಡಿ ಪೊಲೀಸರು ಶ್ರೀಗಳ ವೈದ್ಯಕೀಯ ಪರೀಕ್ಷೆ ನಡೆಸಲು ನೋಟಿಸ್‌ ನೀಡಿದ್ದರು.

ಆದರೆ, ಹೈಕೋರ್ಟ್‌ಗೆ ಶ್ರೀಗಳ ಪರ ವಕೀಲರು ಅರ್ಜಿಸಲ್ಲಿಸಿ ಪರೀಕ್ಷೆಗೆ ತಡೆಯಾಜ್ಞೆ ತಂದಿದ್ದರು. ಇದನ್ನು ಪ್ರಶ್ನಿಸಿ ಸಿಐಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು ಮತ್ತು ತಡೆಯಾಜ್ಞೆ ತೆರವುಗೊಳಿಸುವಂತೆ ಮನವಿ ಮಾಡಿತ್ತು. ಈ ಕುರಿತು ತೀರ್ಪು ನೀಡಿದ್ದ ಕೋರ್ಟ್ ಪರೀಕ್ಷೆ ಆಗಲೇಬೇಕು ಎಂದು ಹೇಳಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+