ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

|
Google Oneindia Kannada News

ಬೆಂಗಳೂರು, ಮೇ 17: ವಿಧಾನ ಪರಿಷತ್ ಹಂಗಾಮಿ ಸಭಾಪತಿಯನ್ನಾಗಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ರಘುನಾಥ್ ರಾವ್ ಮಲ್ಕಾಪುರೆ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 117ರಲ್ಲಿ ಅಧಿಕಾರ ಸ್ವೀಕರಿಸಿದರು. ಮಲ್ಕಾಪುರೆ ಅವರನ್ನು ಸಭಾಪತಿಯನ್ನಾಗಿ ನೇಮಿಸಿ ರಾಜ್ಯಪಾಲ ಥಾವರ್‌ಚಂದ್ರ ಗೆಹ್ಲೋಟ್ ಅವರು ನೇಮಿಸಿ ಆದೇಶಿಸಿದ್ದಾರೆ.

ಜೆಡಿಎಸ್‌ ಒಡನಾಟ ಅಂತ್ಯ; ಬಸವರಾಜ ಹೊರಟ್ಟಿ ಮುಂದಿನ ದಾರಿ? ಜೆಡಿಎಸ್‌ ಒಡನಾಟ ಅಂತ್ಯ; ಬಸವರಾಜ ಹೊರಟ್ಟಿ ಮುಂದಿನ ದಾರಿ?

ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ಮೇ 16ರಂದು ರಾಜೀನಾಮೆ ನೀಡಿದ್ದರು. ನಿಯಮಾವಳಿಗಳ ಪ್ರಕಾರ ಸಭಾಪತಿ ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ನೀಡಬೇಕಾಗುತ್ತದೆ. ಸದ್ಯ ಉಪಸಭಾಪತಿ ಸ್ಥಾನವೂ ಖಾಲಿ ಇದೆ. ಈ ಕಾರಣದಿಂದ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಆವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು. ಈಗ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ಸಭಾಪತಿಯಾಗಿ ನೇಮಕ ಮಾಡಿರುವುದರಿಂದ ಹೊರಟ್ಟಿ ಅವರ ರಾಜೀನಾಮೆ ಸುಗಮವಾಗುತ್ತದೆ.

Raghunath Rao Malkapure appointedd legislative concil chairman

ವಿಧಾನ ಪರಿಷತ್ ಸದಸ್ಯರಾಗಿರುವ ರಘುನಾಥ್ ರಾವ್ ಮಲ್ಕಾಪುರೆ ಮೂಲತಃ ಬೀದರ್ ಜಿಲ್ಲೆಯವರು. ವಿಧಾನ ಪರಿಷತ್ತಿಗೆ 2012 ಮತ್ತು 2018ರಲ್ಲಿ ಎರಡು ಬಾರಿ ಆಯ್ಕೆಯಾಗಿದ್ದಾರೆ.

ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ:
ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದರು.

English summary
Raghunath Rao Malkapure has been appointed as the interim chairperson Karnataka legislative concil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X