Rahim Khan Profile: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ರಹೀಂ ಖಾನ್
ಬೀದರ್, ಮೇ, 27: ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುಸ್ಲಿಂ ಸಮುದಾಯದ ರಹೀಂ ಖಾನ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆ ಆಗಿದ್ದಾರೆ. ಹಾಗಾದರೆ ರಹೀಂ ಖಾನ್ ಅವರ ರಾಜಕೀಯ ಅನುಭವ ಹಾಗೂ ಪರಿಚಯದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೀದರ್ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದ್ದು, 2023 ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಹೀಂ ಖಾನ್ ಅವರು 69,165 ಮತಗಳನ್ನು ಪಡೆದು ಜಯಗಳಿಸಿದ್ದರು. ಇನ್ನು ಇವರಿಗೆ ಭಾರಿ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ ನಾಗರಮಾರಪಲ್ಲಿ 10,780 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ರಹೀಮ್ ಖಾನ್ ಅವರು ಡಿಸೆಂಬರ್ 22, 2018 ರಿಂದ ಜುಲೈ 8, 2019 ರವರೆಗೆ ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡೆಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ. ಹಾಗೆಯೆ ಈ ಬಾರಿಯೂ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆ ಆಗಿ ಗಮನ ಸೆಳೆದಿದ್ದಾರೆ. ಆದರೆ ಈ ಬಾರಿ ಇನ್ನೂ ಖಾತೆ ಹಂಚಿಕೆ ಆಗಿಲ್ಲ ಅಷ್ಟೇ.
ಸಮುದಾಯವಾರು ಸಚಿವ ಸ್ಥಾನ ಹಂಚಿಕೆ
ಹೀಗೆ ಮುಸ್ಲಿಂ ಸಮುದಾಯದಿಂದ ಇಬ್ಬರು ಸಚಿವ ಸ್ಥಾನ ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಮತ್ತೊಂದೆಡೆ ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.
ಇನ್ನು ಒಕ್ಕಲಿಗರಲ್ಲಿ ಐದು ಜನರಿಗೆ ಸಚಿವ ಸ್ಥಾನ ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.
ದಲಿತ ಸಮುದಾಯಕ್ಕೆ 9 ಸಚಿವ ಸ್ಥಾನ ಲಭಿಸಿದ್ದು, ಮುನಿಯಪ್ಪ, ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಈ ಮೂಲಕ ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.
ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.
ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.
ಲಿಂಗಾಯತ ಸಮುದಾಯದ 8 ಜನರಿಗೆ ಸಚಿವ ಸ್ಥಾನ ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು, ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ನಾಮಧಾರಿ ರೆಡ್ಡಿ ಖೋಟಾದಲ್ಲಿ ಸಚಿವರಾಗಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications