Opposition Meeting: ವಿಪಕ್ಷಗಳ ರಣಕಹಳೆ; ಬಿಜೆಪಿ ಹಾಗೂ ವಿರೋಧ ಪಕ್ಷಗಳ ಹೋರಾಟವಲ್ಲ: ರಾಹುಲ್‌ ಗಾಂಧಿ ಹೇಳಿದ್ದೇನು?

ಬೆಂಗಳೂರು, ಜುಲೈ 18: ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿರುವ ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ನಡೆಸಿದ ಸಭೆ ಅಂತ್ಯವಾಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಹಾಕಿಕೊಂಡಿರುವ ವಿಪಕ್ಷಗಳು ಹಲವು ವಿಚಾರವಾಗಿ ಚರ್ಚೆ ನಡೆಸಿದ್ದು, ಇದು ಇಂಡಿಯಾ ಹಾಗೂ ಮೋದಿ ವಿರುದ್ಧದ ಹೋರಾಟ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ‌ ದೇಶದ ಮೇಲೆ ದಾಳಿ‌ ನಡೆಸುತ್ತಿದೆ. ದೇಶದ ಸಂಪತ್ತನ್ನು ಜನರಿಂದ ಕಸಿಯಲಾಗುತ್ತಿದೆ. ಅದನ್ನು ಕೆಲವು ಉದ್ಯಮಿಗಳಿಗೆ ನೀಡಲಾಗುತ್ತಿದೆ. ಈ‌ ಹೋರಾಟ ವಿರೋಧ ಪಕ್ಷ ಹಾಗೂ ಬಿಜೆಪಿ ವಿರುದ್ಧ ಅಲ್ಲ. ದೇಶಕ್ಕಾಗಿ ನಡೆಯುವ ಹೋರಾಟವಾಗಿದೆ.

Rahul Gandhi: A Fight for Nations Welfare, Not Against BJP or Opposition

ಹಾಗಾಗಿ ನಮ್ಮ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರು ನೀಡಲಾಗಿದೆ. ಮುಂದಿನ ಹೋರಾಟ ನರೇಂದ್ರ ಮೋದಿ ಹಾಗೂ‌ ಇಂಡಿಯಾದ ನಡುವೆಯಾಗಿದೆ. ಬಿಜೆಪಿ ಹಾಗೂ ಇಂಡಿಯಾದ ನಡುವೆಯಾಗಿದೆ. ಒಂದು ನಿರ್ದಿಷ್ಟ ಕಾರ್ಯಸೂಚಿಯಡಿಯಲ್ಲಿ ನಮ್ಮ ಮುಂದಿನ ಹೋರಾಟ ನಡೆಯಲಿದೆ.

ಇಂದಿನ ಸಭೆಯಲ್ಲಿ ಉತ್ತಮ ಚರ್ಚೆ ಆಗಿದೆ. ನಮ್ಮ ಹೋರಾಟ ಬಿಜೆಪಿ ವಿಚಾರಧಾರೆ, ಅವರ ಚಿಂತನೆ ವಿರುದ್ಧ. ಅವರು ದೇಶದ ಮೇಲೆ ಆಕ್ರಮಣ ಮಾಡಿ, ನಿರುದ್ಯೋಗ ಹರಡುತ್ತಿದ್ದು, ದೇಶದ ಸಂಪೂರ್ಣ ಸಂಪತ್ತು ಕೆಲವು ಉದ್ಯಮಿಗಳ ವಶಕ್ಕೆ ಸೇರುತ್ತಿದೆ. ಈ ಕಾರಣಕ್ಕೆ ನಾವು ನಮಗೆ ಪ್ರಶ್ನೆ ಕೇಳಿಕೊಂಡು ಈ ಹೋರಾಟ ಯಾರ ನಡುವೆ? ಇದು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಣ ಹೋರಾಟವಲ್ಲ. ಇದು ದೇಶದ ಧ್ವನಿಯ ಪರವಾದ ಹೋರಾಟ. ಈ ಕಾರಣಕ್ಕೆ ಈ ಮೈತ್ರಿಯನ್ನು ಇಂಡಿಯಾ ಎಂದು ಹೆಸರಿಡಲಾಗಿದೆ. ಈ ಹೋರಾಟ ಎನ್ ಡಿಎ ಹಾಗೂ ಇಂಡಿಯಾ ವಿರುದ್ಧ, ಇಂಡಿಯಾ ಹಾಗೂ ಮೋದಿ ವಿರುದ್ಧದ ಹೋರಾಟ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಯಾರೇ ಇಂಡಿಯಾ ವಿರುದ್ಧ ನಿಂತರು ಗೆಲವು ಯಾರಿಗೆ ಸಿಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದಿನ ಸಭೆ ಮಹಾರಾಷ್ಟ್ರದಲ್ಲಿ ನಡೆಯಲಿದ್ದು, ಕಾರ್ಯ ಯೋಜನೆ ಸಿದ್ಧಪಡಿಸಿ ನಾವು ಒಂದಾಗಿ ನಮ್ಮ ವಿಚಾರಧಾರೆಗಳನ್ನು ಜನರಿಗೆ ತಿಳಿಸಬೇಕಿದೆ. ಬಿಜೆಪಿಯ ಸಿದ್ಧಾಂತಗಳು ಭಾರತದ ಪರಿಕಲ್ಪನೆ ಮೇಲೆ ದಾಳಿ ಮಾಡುತ್ತಿದೆ. ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಗಳು ಹೆಚ್ಚುತ್ತಿವೆ.

Rahul Gandhi: A Fight for Nations Welfare, Not Against BJP or Opposition

ಇದು ರಾಜಕೀಯ ಪಕ್ಷಗಳ ಹೋರಾಟವಲ್ಲ. ಇದು ಇಂಡಿಯಾದ ಪರಿಕಲ್ಪನೆ ರಕ್ಷಣೆಯ ಹೋರಾಟವಾಗಿದ್ದು, ನಾವು ಪ್ರಜಾಪ್ರಭುತ್ವ, ಸಂವಿಧಾನ, ಜನರ ಧ್ವನಿಯ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಈ ಕಾರಣಕ್ಕೆ ನಾವು ನಮ್ಮ ಮೈತ್ರಿಯನ್ನು ಇಂಡಿಯಾ ಎಂದು ತೀರ್ಮಾನಿಸಿದ್ದೇವೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+