ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ದೀರ್ಘ ಪಟ್ಟಿಗೆ ರಾಹುಲ್ ಒಪ್ಪಿಗೆ

|
Google Oneindia Kannada News
ಬೆಂಗಳೂರು, ಜನವರಿ 31: ಕೆಪಿಸಿಸಿ ಲೋಕಸಭೆ ಚುನಾವಣೆ ಪ್ರಚಾರ ಸಮಿತಿಯ ಸುದೀರ್ಘ 
ಪಟ್ಟಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಅಂಕಿತ ಹಾಕಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಜವಾಬ್ದಾರಿಯನ್ನು ಹೊರಲಿರುವ 63 ಮಂದಿಯ ಸುದೀರ್ಘ ಪಟ್ಟಿಯನ್ನು ಕೆಪಿಸಿಸಿಯು ಕಾಂಗ್ರೆಸ್‌ ಹೈಕಮಾಂಡ್‌ ಅಂಕಿತಕ್ಕೆ ಕಳುಹಿಸಿತ್ತು. ಪಟ್ಟಿಯನ್ನು ರಾಹುಲ್ ಗಾಂಧಿ ಅವರು ಅನುಮೋದಿಸಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಪಟ್ಟಿಗೆ ಅಂಕಿತ ಹಾಕಿದ್ದಾರೆ.

ಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಪರಮೇಶ್ವರ್, ಈಶ್ವರ್ ಖಂಡ್ರೆ, ಡಿ.ಕೆ.ಶಿವಕುಮಾರ್, ಸಿಎಸ್ ನಾಡಗೌಡ, ಕೆಸಿ ರಾಮಮೂರ್ತಿ, ಜಮೀರ್ ಅಹ್ಮದ್ ಇದೇ ಮೊದಲಾದವರು ಪಟ್ಟಿಯಲ್ಲಿ ಮೊದಲಿಗಿದ್ದಾರೆ.

Rahul Gandhi approved campaign committee for KPCC

ಪ್ರಚಾರ ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಲಾಗಿಲ್ಲ. ಅವರಿಗೆ ಬೇರೆ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಇದೆ.

ಹಳೆ ಮಿತ್ರ ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡಹಳೆ ಮಿತ್ರ ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡ

ನಿನ್ನೆಯಷ್ಟೆ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೊಂದಿಗೆ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಮಾತುಕತೆ ನಡೆಸಿದ್ದರು. ಈ ಸಮಯ ಮೈತ್ರಿ ಸರ್ಕಾರದ ಭಿನ್ನಾಭಿಪ್ರಾಯಗಳ ಜೊತೆಗೆ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದ್ದು, ಈ ಬಗ್ಗೆ ಕ್ಷೇತ್ರವಾರು ಕಾಂಗ್ರೆಸ್‌ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಇದರ ಜವಾಬ್ದಾರಿಯನ್ನು ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊರಿಸಲಾಗಿದೆ.

English summary
AICC president Rahul Gandhi has approved proposal of a campaign committee for KPCC for Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X