ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ, ಮಧ್ಯ ಕರ್ನಾಟಕದಲ್ಲಿ ಪ್ರಚಾರ

ಶಿವಮೊಗ್ಗ, ಏಪ್ರಿಲ್ 03: ಕಳೆದ ಬಾರಿ ಕರಾವಳಿ, ಹಾಸನ, ಮೈಸೂರುಗಳಲ್ಲಿ ಕಾಂಗ್ರೆಸ್ ರಣಕಹಳೆ ಮೊಳಗಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಎರಡು ದಿನಗಳ ಕಾಲ ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಈಗಾಗಲೇ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದಿರುವ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇನ್ನೂ ಹಲವು ರಾಜ್ಯ ಮುಖಂಡರು ಸ್ವಾಗತಿಸಿದ್ದಾರೆ.

ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗಕ್ಕೆ ತೆರಳಲಿರುವ ರಾಹುಲ್ ಗಾಂಧಿ ಶಿವಮೊಗ್ಗದ ಅಶೋಕ ವೃತ್ತದಿಂದ ತೆರೆದ ವಾಹನದಲ್ಲಿ ರಾಜ್ಯ ನಾಯಕರುಗಳ ಜೊತೆ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ನೆಹರು ವೃತ್ತಕ್ಕೆ ಆಗಮಿಸಿ ಅಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Rahul Gandhi arrives to Karnataka for two days election campaign

ಸಮಾವೇಶದ ಬಳಿಕ ನಗರದ ಪಕ್ಷದ ಕಚೇರಿಗೆ ತೆರಳಿ ಅಲ್ಲಿ ಪಕ್ಷದ ಮುಖಂಡರ ಜೊತೆ ಟಿಕೆಟ್ ಮತ್ತು ಪ್ರಚಾರ ವೈಕರಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ನಂತರ ರಸ್ತೆ ಮೂಲಕ ದಾವಣಗೆರೆಗೆ ತೆರಳಿ ಅಲ್ಲಿಯೂ ರೋಡ್‌ ಶೋ ನಡೆಸಿ, ಅಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಇಂದು ದಾವಣಗೆರೆಯ ಬಾಪೂಜಿ ಗೆಸ್ಟ್‌ ಹೌಸ್‌ನಲ್ಲಿ ತಂಗಲಿದ್ದಾರೆ.

ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಡೆಯುವ ಮಂಗಳವಾರ ಸಂತೆಯನ್ನು ರದ್ದು ಮಾಡಲಾಗಿದ್ದು, ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+