ಲೋಕಸಭೆನೂ ಗೆಲ್ತಿವಿ ರಾಹುಲ್‌ ಪ್ರಧಾನಿಯಾಗ್ತಾರೆ: ಭವಿಷ್ಯ ನುಡಿದ ಕಾಂಗ್ರೆಸ್‌ ನಾಯಕ

ದಾವಣಗೆರೆ, ಡಿಸೆಂಬರ್‌ 03: ಪಂಚರಾಜ್ಯ ಚುನಾವಣೆ ಸೆಮಿ ಫೈನಲ್. ಇಲ್ಲಿ ಗೆದ್ದು ಲೋಕಸಭೆನೂ ಗೆಲ್ಲುತ್ತೇವೆ, ನಮ್ಮ ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ , ಕಾಂಗ್ರೆಸ್ ಪಕ್ಷಕ್ಕೆ ಒಳ್ಳೇಯ ದಿನ. ಐದರಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಲ್ಲಾ ಸಮೀಕ್ಷೆಗಳು ಕೂಡ ನಮ್ಮ ಪರವಾಗಿ ಬಂದಿವೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆಗೆ ದಿಕ್ಸೂಚಿ. ಬಿಜೆಪಿ ಅಡಳಿತದಿಂದ ಜನರು ರೋಸಿ ಹೋಗಿದ್ದಾರೆ ಎಂದು ಹೇಳಿದರು.

Rahul Gandhi Becomes The Prime Minister Says Congress Leader Saleem Ahmed

15 ಲಕ್ಷ ಹಣ ಖಾತೆಗೆ ಬಂದಿಲ್ಲ, ಉದ್ಯೋಗ ಸೃಷ್ಠಿಯಾಗಿಲ್ಲ. ಬರೀ ನಮ್ ಕೀ ಬಾತ್ ಮಾಡಿಕೊಂಡು ಕಾಮ್ ಕೀ ಬಾತ್ ಮರ್ತಿದ್ದಾರೆ, ಈ ಬಾರಿ INDIA ಅಧಿಕಾರಕ್ಕೆ ಬರೋದು ಶತಸಿದ್ದ. ಈ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿ ಬರ ಇದ್ದರೂ ಕೇಂದ್ರ ದಿಂದ ಮಾತ್ರ ಹಣ ಬಿಡುಗಡೆಯಾಗಿಲ್ಲ. 25 ಜನ ಸಂಸದರು ಐದು ಜನ ಕೇಂದ್ರ ಮಂತ್ರಿಗಳು ಇದ್ದರೂ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವೆ ನಿರ್ಮಲ ಸೀತರಾಮನ್ ಕರ್ನಾಟಕದವರೇ ಆಗಿದ್ದಾರೆ. ಅದರೂ ಕೂಡ ಬರ ಪರಿಹಾರ ಬಿಡುಗಡೆ ಮಾಡಿಸಲು ಆಗುತ್ತಿಲ್ಲ, ರಾಜ್ಯ ಸರ್ಕಾರ ಬರ ನಿರ್ವಹಣೆ ಸರಿಯಾಗಿ ಮಾಡುತ್ತಿದೆ.

ವಿಜಯೇಂದ್ರ, ಅಶೋಕ್ ಇಬ್ಬರು ಆಯ್ಕೆಯಾಗಿದ್ದು ಆರು ತಿಂಗಳ ನಂತರ.ಈ ಜೋಡೆತ್ತುಗಳಿಂದ ಕಾಂಗ್ರೆಸ್ ಗೆ ಯಾವುದೇ ತೊಂದರೆ ಇಲ್ಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ವು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ, ಜೆಡಿಎಸ್‌ನ ಹಲವು ಮುಖಂಡರು, ಶಾಸಕರು ಮುಂದಾಗಿದ್ದಾರೆ.ಬೆಳಗಾವಿಯ ವಿಧಾನಸಭೆ ಅಧಿವೇಶನದ ಬಳಿಕ ಹಲವರು ಕಾಂಗ್ರೆಸ್ ಸೇರಲಿದ್ದಾರೆ ಈ ಮೂಲಕ ಆಪರೇಷನ್ ಹಸ್ತದ ಕುರಿತು ಸುಳಿವು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+