54ನೇ ವಸಂತಕ್ಕೆ ರಾಹುಲ್ ಗಾಂಧಿ ಎಂಟ್ರಿ: ಶುಭ ಹಾರೈಸಿದ ಕಾಂಗ್ರೆಸ್ ನಾಯಕರು!
ಬೆಂಗಳೂರು: ರಾಹುಲ್ ಗಾಂಧಿ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಮುಖಂಡರು ಶುಭ ಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಟ್ವೀಟ್ ಮಾಡಿ ಸ್ಪೆಷಲ್ ವಿಶ್ ಮಾಡಿದ್ದಾರೆ. ಹಾಗಾದ್ರೆ ಇವರೆಲ್ಲಾ ರಾಹುಲ್ ಗಾಂಧಿಗೆ ಶುಭ ಕೋರಿದ್ದು ಹೇಗೆ? ಮುಂದೆ ಓದಿ.
ಕರ್ನಾಟಕ ಚುನಾವಣೆ ಗೆಲುವು ಹಾಗೂ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಈ ಬಾರಿಯ ಹುಟ್ಟುಹಬ್ಬ ರಾಹುಲ್‌ಗೆ ಸ್ಪೆಷಲ್. ಹೀಗೆ 54ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ತಮ್ಮ ನಾಯಕನಿಗೆ ಕಾಂಗ್ರೆಸ್ ಮುಖಂಡರು ಶುಭ ಕೋರುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿಗೆ ಶುಭಾಶಯ ಹೇಳುತ್ತಿದ್ದು, ಅದ್ರಲ್ಲೂ ಸಿಎಂ ಸಿದ್ದರಾಮಯ್ಯ ಪ್ರೀತಿಯ ಅಂಗಡಿ ಪದ ಬಳಸಿ ವಿಶ್ ಮಾಡಿದ್ದಾರೆ. ಹಾಗೇ ನಿಮ್ಮ ಸಂದೇಶ ಲಕ್ಷಾಂತರ ಭಾರತೀಯರ ಧ್ವನಿಯಾಗಲಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕೂಡ ವಿಶೇಷ ಸಂದೇಶ ಕಳುಹಿಸಿದ್ದಾರೆ.

'ನಿಮ್ಮ ಸಂದೇಶ ಭಾರತೀಯರ ಧ್ವನಿಯಾಗಲಿ'
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮೂಲಕ, 'ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾಂವಿಧಾನಿಕ ಮೌಲ್ಯಗಳಿಗೆ ನಿಮ್ಮ ಅಚಲ ಬದ್ಧತೆ ಮತ್ತು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಅದಮ್ಯ ಧೈರ್ಯ ಮೆಚ್ಚುವಂತದ್ದು. ಸಹಾನುಭೂತಿ ಮತ್ತು ಸಾಮರಸ್ಯದ ಸಂದೇಶ ಹರಡುವುದನ್ನು ಮುಂದುವರಿಸಿ. ನಿಮ್ಮ ಸಂದೇಶ ಲಕ್ಷಾಂತರ ಭಾರತೀಯರ ಧ್ವನಿಯಾಗಲಿ' ಎಂದು ರಾಹುಲ್ ಗಾಂಧಿ ಹುಟ್ಟುಹಬ್ಬದ ದಿನ ಶುಭಾಶಯ ಕೋರಿದ್ದಾರೆ.
Warm birthday greetings to Shri @RahulGandhi.
— Mallikarjun Kharge (@kharge) June 19, 2023
Your unflinching commitment to Constitutional values and your indomitable courage in the face of adversity is admirable.
May you continue speaking truth to power and be the voice of millions of Indians, while spreading the message…
'ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ'
ಹಾಗೇ ಸಿಎಂ ಸಿದ್ದರಾಮಯ್ಯ ಕೂಡ ರಾಹುಲ್ ಗಾಂಧಿಗೆ ಶುಭ ಕೋರಿದ್ದಾರೆ. ರಾಹುಲ್ & ಸಿದ್ದರಾಮಯ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಒಟ್ಟಿಗೆ ಪಾದಯಾತ್ರೆ ನಡೆಸಿದ್ದರು. ಈ ಫೋಟೋ ಹಾಕಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶದಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ದ್ವೇಷವನ್ನು ಪ್ರೀತಿಯಿಂದ ಗೆಲ್ಲಬಹುದೆಂಬ ನಂಬಿಕೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ನಾಯಕರು ಮತ್ತು ಕಾರ್ಯಕರ್ತರಿಗೆ ಆದರ್ಶವಾಗಲಿ.' ಎಂದಿದ್ದಾರೆ.
ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು ದೇಶಾದ್ಯಂತ ಸೌಹಾರ್ದತೆಯ ಸಿಹಿ ಹಂಚಿ ಭಾರತೀಯರ ಮನಸ್ಸುಗಳನ್ನು ಜೋಡಿಸುತ್ತಿರುವ ಭವಿಷ್ಯದ ಭರವಸೆಯ ಆಶಾಕಿರಣ ಮತ್ತು ನಮ್ಮೆಲ್ಲರ ಹೆಮ್ಮೆಯ ನಾಯಕ @RahulGandhi ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
— Siddaramaiah (@siddaramaiah) June 19, 2023
ನಿಮ್ಮ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ದ್ವೇಷವನ್ನು ಪ್ರೀತಿಯಿಂದ… pic.twitter.com/cumbaNvvmt
'ದ್ವೇಷವನ್ನು ಪ್ರೀತಿಯಿಂದ ಗೆಲ್ಲಬಹುದೆಂಬ ನಂಬಿಕೆ'
ಡಿಸಿಎಂ ಡಿಕೆ ಶಿವಕುಮಾರ್ ಅವರು, 'ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಯಲ್ಲಿ ನಿಮ್ಮ ಸಮರ್ಪಣೆ ಮತ್ತು ಬದ್ಧತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಪ್ರಸಕ್ತ ವರ್ಷ ನಿಮಗೆ ಅಪಾರ ಸಂತೋಷ, ಉತ್ತಮ ಆರೋಗ್ಯ ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ನಿಮಗೆ ಹೆಚ್ಚಿನ ಶಕ್ತಿ ದೊರೆಯಲಿ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
Sending warmest birthday wishes to Sri @RahulGandhi.
— DK Shivakumar (@DKShivakumar) June 19, 2023
Your dedication and commitment to public service is truly inspiring.
May this year bring you immense happiness, good health and more strength to bring positive change.#HappyBirthdayRahulGandhi pic.twitter.com/y0rG9NrfE6
ಒಟ್ನಲ್ಲಿ ಕರ್ನಾಟಕ ಕಾಂಗ್ರೆಸ್ ಮುಖಂಡರು ಸೇರಿದಂತೆ ದೇಶಾದ್ಯಂತ ಕೈ ಕಾರ್ಯಕರ್ತರು ರಾಹುಲ್ ಗಾಂಧಿಗೆ ಶುಭ ಕೋರಿದ್ದಾರೆ. ಈ ಬಾರಿಯ ಕರ್ನಾಟಕ ಚುನಾವಣೆ ಗೆಲುವು & ಭಾರತ್ ಜೋಡೋ ಯಾತ್ರೆ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಮತ್ತಷ್ಟು ಖುಷಿ ತಂದಿದೆ. ಅದರಲ್ಲೂ ಕರ್ನಾಟಕದ ಕಾಂಗ್ರೆಸ್ ಮುಖಂಡರು, ನಾಯಕರು ತುಂಬಾ ಖುಷಿಯಿಂದಲೇ ವಿಶೇಷ ಸಂದೇಶ ಕಳುಹಿಡಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications