ಕರ್ನಾಟಕ ಚುನಾವಣೆ : ಜ.13ರಂದು ಸಭೆ ಕರೆದ ರಾಹುಲ್ ಗಾಂಧಿ

Posted By: Gururaj
Subscribe to Oneindia Kannada

ಬೆಂಗಳೂರು, ಜನವರಿ 08 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆ ಗಮನ ಹರಿಸಿದ್ದು, ಜ.13ರಂದು ಪಕ್ಷದ ನಾಯಕರ ಸಭೆ ಕರೆದಿದ್ದಾರೆ.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕದ ನಾಯಕರ ಸಭೆ ನಡೆಸುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ.27ರಂದು ರಾಹುಲ್ ಗಾಂಧಿ ರಾಜ್ಯಕ್ಕೆ, ವಿವಿಧ ಜಿಲ್ಲೆಗೆ ಭೇಟಿ

Rahul Gandhi calls Karnataka leaders meeting on January 13

ಜನವರಿ 27ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದು ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬಳ್ಳಾರಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಗಳ ಬಗ್ಗೆಯೂ ಅವರು ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

ಪುಟ್ಟಣ್ಣ ಬಿಜೆಪಿ ಸೇರಿದರೆ ಯಶವಂತಪುರದಿಂದ ಸ್ಪರ್ಧೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ನವ ಕರ್ನಾಟಕ ನಿರ್ಮಾಣ ಯಾತ್ರೆ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಭೇಟಿಯ ಸಮಯದಲ್ಲಿ ಈ ಯಾತ್ರೆಯ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಪುಟ್ಟಣ್ಣ ಕಾಂಗ್ರೆಸ್‌ಗೆ? : ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಪುಟ್ಟಣ್ಣ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಸುದ್ದಿ ಹಬ್ಬಿದೆ. ಪುಟ್ಟಣ್ಣ ಬಿಜೆಪಿ ಸೇರಲಿದ್ದಾರೆ, 2018ರ ಚುನಾವಣೆಯಲ್ಲಿ ಅವರು ಯಶವಂತಪುರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

Rahul Gandhi calls Karnataka leaders meeting on January 13

ಪುಟ್ಟಣ್ಣ ಅವರು ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಆಪ್ತರು. ಬಾಲಕೃಷ್ಣ ಅವರು ಈಗಾಗಲೇ ಕಾಂಗ್ರೆಸ್ ಸೇರಲಿದ್ದಾರೆ. ಪುಟ್ಟಣ್ಣ ಅವರನ್ನು ಪಕ್ಷಕ್ಕೆ ಕರೆತರಲು ನಾಯಕರು ಬಾಲಕೃಷ್ಣ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
AICC president Rahul Gandhi called meeting of Karnataka Congress leaders on January 13, 2018. Chief Minister Siddaramaiah, KPCC president Dr.G.Parameshwara and other leaders will attend meeting.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ