ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ, ಸಿದ್ದರಾಮಯ್ಯಗೆ ಸ್ಥಾನ

Recommended Video

      ರಾಷ್ಟ್ರ ರಾಜಕಾರಣಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ ಸಿದ್ದರಾಮಯ್ಯ | Oneinda Kannada

      ಬೆಂಗಳೂರು, ಜುಲೈ 17 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯಲ್ಲಿ ಸ್ಥಾನ ಪಡೆದಿದ್ದು, ರಾಷ್ಟ್ರರಾಜಕಾರಣಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ.

      ಮಂಗಳವಾರ ರಾಹುಲ್ ಗಾಂಧಿ ಎಐಸಿಸಿ ವರ್ಕಿಂಗ್ ಕಮಿಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಗುಲಾಂ ನಬಿ ಆಜಾರ್ ಸೇರಿದಂತೆ 23 ಸದಸ್ಯರು ಸಮಿತಿಯಲ್ಲಿದ್ದಾರೆ.

      ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರ ಬದಲು ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದೆ.

      Siddaramaiah

      ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸೇರುವ ಮೂಲಕ ಸಿದ್ದರಾಮಯ್ಯ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೆಚ್ಚಿಸಿಕೊಂಡಿದ್ದಾರೆ. ಸಮಿತಿ ಸೇರುವ ಮೂಲಕ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣದತ್ತ ಮೊದಲ ಹೆಜ್ಜೆ ಇಟ್ಟಿದ್ದಾರೆ.

      ಹಿರಿಯ ಮತ್ತು ಕಿರಿಯ ನಾಯಕರನ್ನು ಒಳಗೊಂಡ ಸಮಿತಿಯನ್ನು ರಾಹುಲ್ ಗಾಂಧಿ ರಚನೆ ಮಾಡಿದ್ದಾರೆ. ಜು.22ರಂದು ಸಮಿತಿ ಮೊದಲ ಸಭೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದ ಎಲ್ಲಾ ಪ್ರಮುಖ ನಿರ್ಧಾರವನ್ನು ವರ್ಕಿಂಗ್ ಕಮಿಟಿ ಸಭೆಯ ಬಳಿಕ ತೆಗೆದುಕೊಳ್ಳಲಾಗುತ್ತದೆ.

      ಸಮಿತಿಯ ಸದಸ್ಯರು

      committee
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+