• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶನಿವಾರ ಕರ್ನಾಟಕದಲ್ಲಿ ಮೋದಿ, ರಾಹುಲ್ ಪ್ರಚಾರ

|

ಬೆಂಗಳೂರು, ಏಪ್ರಿಲ್ 12 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಶನಿವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಜ್ಯಲ್ಲಿ ಏಪ್ರಿಲ್ 18 ಮತ್ತು 21ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.

ರಾಹುಲ್ ಗಾಂಧಿ ಅವರು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2 ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಲೋಕಸಭಾ ಚುನಾವಣಾ ಪುಟ

ರಾಹುಲ್ ಗಾಂಧಿ ಅವರು ಮಧ್ಯಾಹ್ನ 12ಗಂಟೆಗೆ ಕೋಲಾರ, ಮಧ್ಯಾಹ್ನ 3ಗಂಟೆಗೆ ಚಿತ್ರದುರ್ಗದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5 ಗಂಟೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ದೇವೇಗೌಡರ ಮಾತು ನಂಬುತ್ತೀರಾ? ಕೊಪ್ಪಳದಲ್ಲಿ ಮೋದಿ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ಬೃಹತ್ ಸಮಾವೇಶ ನಡೆಯಲಿದೆ.

ಶಿವಮೊಗ್ಗ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸುದ್ದಿ ಠುಸ್!

ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಕಣದಲ್ಲಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿದೆ.

English summary
AICC president Rahul Gandhi will campaign in Karnataka on April 13, 2019 for Lok sabha elections. He will visit Mandya, Chitradurga and Kolar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X