ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ

Recommended Video

      ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ | Oneindia Kannada

      ಮೈಸೂರು, ಮಾರ್ಚ್ 24: ಎರಡು ದಿನಗಳ ಮೈಸೂರು, ಮಂಡ್ಯ, ಚಾಮರಾಜನಗರ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಂದು ಬೆಳಿಗ್ಗೆ 9 ಗಂಟೆಗೆ ದೆಹಲಿಯಿಂದ ಮಂಡಕಳ್ಳಿ ವಿಶೇಷ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

      ಇಲ್ಲಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಉಪಸ್ಥಿತರಿದ್ದರು.

      In Pics: ಅರಮನೆ ನಗರಿ ಮೈಸೂರಲ್ಲಿ ರಾಹುಲ್ ಗಾಂಧಿ ಕಮಾಲ್

      ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಮಹದೇವಪ್ಪ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ರಾಹುಲ್ ಗೆ ಸಾಥ್ ನೀಡಿದರು.

      Rahul Gandhi in Mysuru: offers pooja in Chamundi hills

      ಸಾಮಾನ್ಯ ಜನರಿಗೆ ಎಂದಿನಂತೆ ಚಾಮುಂಡೇಶ್ವರಿ ದೇವಿ ದರ್ಶನ ಭಾಗ್ಯ ಸಿಗಲಿದೆ. ರಾಹುಲ್ ಗಾಂಧಿ ಆಗಮನದಿಂದ ಸಾಮಾನ್ಯ ಭಕ್ತರಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

      Rahul Gandhi in Mysuru: offers pooja in Chamundi hills

      ನಾಡದೇವತೆ ದರ್ಶನದ ಬಳಿಕ ಬೆಳಿಗ್ಗೆ 10.15 ಕ್ಕೆ ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳ ಜತೆ ರಾಹುಲ್ ಸಂವಾದ ನಡೆಸಲಿದ್ದಾರೆ. ನಂತರ ಚಾಮರಾಜನಗರಕ್ಕೆ ತೆರಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+