Rahul Gandhi: ಕರ್ನಾಟಕದ ಈ ಕ್ಷೇತ್ರದಿಂದ ಲೋಕಸಭೆಗೆ ರಾಹುಲ್ ಗಾಂಧಿ ಸ್ಪರ್ಧೆ!?
ಬೆಂಗಳೂರು, ಡಿಸೆಂಬರ್ 11: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆಗೆ ಪ್ರತಿಷ್ಠೆಯ ಕಣವಾಗಿದೆ. ಆಡಳಿತರೂಢ ಕಾಂಗ್ರೆಸ್ ಮೈತ್ರಿಗೆ ಸಡ್ಡು ಹೊಡೆಯಲು ಹಲವು ತಂತ್ರಗಾರಿಕೆಯನ್ನ ನಡೆಸಿದೆ.
ಹೌದು, 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳಿಗಿಂತ ಹೆಚ್ಚಿನ ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಟಾರ್ಗೆಟ್ ನೀಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಭಾವಿ ಅಭ್ಯರ್ಥಿಗಳ ಹುಡುಕಾಟವನ್ನ ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದಾರೆ. ಹೀಗಾಗಿ ಸೂಕ್ತ ಅಭ್ಯರ್ಥಿಗಳಿಗಾಗಿ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ವೀಕ್ಷಕರನ್ನಾಗಿ ಸಚಿವರನ್ನ ನೇಮಕ ಮಾಡಲಾಗಿಗಿದೆ. ಈ ನಡುವೆ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ ಕುರಿತು ಮಾತುಗಳು ಕೇಳಿ ಬರುತ್ತಿವೆ.

ಈಗಾಗಲೇ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರಿಗೆ ಗಾಳ ಹಾಕಿದ್ದಾರೆ. ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ವಿ ಸೋಮಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ತುಮಕೂರಿನ ಸ್ಥಳೀಯ ಕಾಂಗ್ರೆಸ್ ನಾಯಕರು ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ವಿ ಸೋಮಣ್ಣ ತುಮಕೂರಿನಿಂದ ಸ್ಪರ್ಧೆ ಮಾಡುವುದು ಬೇಡ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬಂದಿದೆ.
ಈ ಕುರಿತು ಬುಧವಾರ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಭೆ ನಡೆಸಲಿದ್ದಾರೆ. ಈಗಾಗಲೇ ವಿ ಸೋಮಣ್ಣ ಅವರು ತುಮಕೂರಿನಿಂದ ಸ್ಪರ್ಧಿಸುವುದು ಬೇಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ನಿಂದ ಭಾರೀ ಒತ್ತಡ ಕೇಳಿ ಬಂದಿದೆ.
ಶಾಸಕ ಟಿ ಜಿ ಜಯಚಂದ್ರ, ಗುಬ್ಬಿ ಶ್ರೀನಿವಾಸ್ ಹಾಗೂ ಶಿವಲಿಂಗೇಗೌಡ ಅವರು ರಾಹುಲ್ ಗಾಂಧಿ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಲು ಜಿಲ್ಲಾ ಕಾಂಗ್ರೆಸ್ ನಲ್ಲಿ ಸಿದ್ದತೆ ನಡೆಸುತ್ತಿದೆ.

ತುಮಕೂರು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಟಿ ಬಿ ಜಯಚಂದರ ಆಹ್ವಾನ ನೀಡಿದ ವಿಚಾರವಾಗಿ ಶಾಸಕ ಗುಬ್ಬಿ ಶ್ರೀನಿವಾಸ್ ಅವರು ಮಾತನಾಡಿ, ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದರೇ ನಮಗೆ ಸಂತೋಷ ಆಗುತ್ತದೆ. ರಾಹುಲ್ ಗಾಂಧಿ ಈ ಕ್ಷೇತ್ರಕ್ಕೆ ಬಂದರೇ ನಾವು ಸ್ವಾಗತ ಮಾಡುತ್ತೇವೆ. ರಾಹುಲ್ ಗಾಂಧಿ ಕ್ಷೇತ್ರಕ್ಕೆ ಬರಲಿ ಎಂದು ಹಿರಿಯ ನಾಯಕರಾದ ಟಿ ಜಿ ಜಯಚಂದ್ರ ಆಹ್ವಾನ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ನಾಯಕರು ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿ ಆಹ್ವಾನ ನೀಡುತ್ತೇವೆ ಎಂದು ಹೇಳಿದರು.
ರಾಷ್ಟ್ರ ಮಟ್ಟದ ನಾಯಕರಾದ ರಾಹುಲ್ ಗಾಂಧಿ ಎಲ್ಲಿ ಸ್ಪರ್ಧಿಸಲು ಮುಕ್ತವಾದ ಅವಕಾಶ ಇದೆ. ರಾಹುಲ್ ಗಾಂಧಿ ಸ್ಪರ್ಧೆಗೆ ನಮ್ಮ ಸ್ವಾಗತ ಇದೆ. ಎಲ್ಲಾ ಜಿಲ್ಲಾ ನಾಯಕರು ಹಾಗೂ ಜಿಲ್ಲೆಯ ಸಚಿವರು ಈ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ.












Click it and Unblock the Notifications