ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನ ಇಳಿಸಲು ಕಾಯುತ್ತಿದ್ದಾರೆ: ಕಾರಣ ಬಿಚ್ಚಿಟ್ಟ ಜನಾರ್ದನ ರೆಡ್ಡಿ
ಕೊಪ್ಪಳ ಏಪ್ರಿಲ್ 24: ಲೋಕಸಭಾ ಚುನಾವಣೆ ಹಿನ್ನೆಲೆ ಅಬ್ಬರ ಪ್ರಚಾರ ರಾಜಕೀಯ ಪಕ್ಷಗಳು ನಡೆಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದು ಮಾಜಿ ಹಾಗೂ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರ ಬಳಿಯೂ ದುಡ್ಡು ತೆಗೆದುಕೊಳ್ಳಲ್ಲ. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ಗೆ ದುಡ್ಡು ಕೊಡುವ ಸಿಎಂ ಬೇಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದರು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ ಮತ್ತು ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್ಗೆ ದುಡ್ಡು ಕೊಡುವ ಮುಖ್ಯಮಂತ್ರಿ ಬೇಕಾಕಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ಗೆ ಡಿ.ಕೆ.ಶಿವಕುಮಾರ್ರಂತಹ ಮುಖ್ಯಮಂತ್ರಿ ಬೇಕಾಗಿದೆ. ಅದಕ್ಕೆ ಡಿ.ಕೆ. ಶಿವಕುಮಾರ್ರನ್ನು ಸಿಎಂ ಮಾಡಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ. ಮಂಡ್ಯ ಸಮಾವೇಶದಲ್ಲಿ ರಾಹುಲ್ ಗಾಂಧಿ ಈ ಸಂದೇಶ ರವಾನೆ ಮಾಡಿದ್ದಾರೆ ಎಂದರು.
ಮೋದಿ ಮೋದಿ ಎಂದರೆ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ತಂಗಡಗಿ ಹೇಳಿಕೆಯನ್ನು ಪ್ರಸ್ತಾಪಿಸಿ, ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ. ತಂಗಡಗಿ ಕಪಾಳಕ್ಕೆ ನಾವು ಹೊಡೆಯೋದು ಬೇಕಾಗಿಲ್ಲ. ಅದು ನಮ್ಮ ಸಂಸ್ಕಾರ ಅಲ್ಲ, ಅದು ನಮ್ಮ ಸಂಸ್ಕೃತಿಯೂ ಅಲ್ಲ ಅಂತ ಹೇಳಿದ್ರು ಎಂದು ತೀವ್ರ ವಾಗ್ದಾಳಿ ನಡೆಸಿದರು.












Click it and Unblock the Notifications