ಏ.3ರಿಂದ ರಾಹುಲ್ ಗಾಂಧಿ ರಾಜ್ಯ ಪ್ರವಾಸ, ಕಾರ್ಯಕ್ರಮಗಳು

ಬೆಂಗಳೂರು, ಏಪ್ರಿಲ್ 02 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಮಂಗಳವಾರ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ರಾಹುಲ್ ಗಾಂಧಿ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮಠಕ್ಕೆ ಭೇಟಿ ನೀಡಲಿದ್ದಾರೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಅವರು ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮಿಗ ದರ್ಶನ ಪಡೆಯಲಿದ್ದಾರೆ.

ಚಿತ್ರಗಳು: ಮೈಸೂರಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಶಿವಮೊಗ್ಗ ಮತ್ತು ಹರಿಹರದಲ್ಲಿ ರೋಡ್ ಶೋ ನಡೆಸಲಿರುವ ರಾಹುಲ್ ಗಾಂಧಿ ದಾವಣಗೆರೆಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಹೊಳಲ್ಕೆರೆ ಮತ್ತು ಮಾಗಡಿಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Rahul Gandhi Karnataka tour April 3 and 4 program

ರಾಹುಲ್ ಗಾಂಧಿ ಕಾರ್ಯಕ್ರಮಗಳು

ಏಪ್ರಿಲ್ 3, 2018

* ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕ ಆಗಮನ
* ಶಿವಮೊಗ್ಗದ ಹೊಸ ಕಾಂಗ್ರೆಸ್ ಕಚೇರಿ ಉದ್ಘಾಟನೆ
* ಬಸ್ ನಿಲ್ದಾಣದಿಂದ ಗೋಪಿ ಸರ್ಕಲ್ ತನಕ ರೋಡ್ ಶೋ
* ಗೋಪಿ ಸರ್ಕಲ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ
* ಹೊನ್ನಾಳಿ, ಹರಿಹರದಲ್ಲಿ ರೋಡ್ ಶೋ
* ದಾವಣಗೆರೆಯಲ್ಲಿ ಸಮಾವೇಶ ಉದ್ದೇಶಿಸಿ ಭಾಷಣ
* ದಾವಣಗೆರೆಯಲ್ಲಿ ವಾಸ್ತವ್ಯ

ಏಪ್ರಿಲ್ 4, 2018

* ದಾವಣಗೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜೊತೆ ಸಭೆ
* ಹೊಳಲ್ಕೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ
* ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ
* ತುಮಕೂರಿಗೆ ಪ್ರಯಾಣ
* ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ
* ಕುಣಿಗಲ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ
* ಮಾಗಡಿಗೆ ಭೇಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+