ಜ.27ರಂದು ರಾಹುಲ್ ಗಾಂಧಿ ರಾಜ್ಯಕ್ಕೆ, ವಿವಿಧ ಜಿಲ್ಲೆಗೆ ಭೇಟಿ
ಬೆಂಗಳೂರು, ಜನವರಿ 04 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 27ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಮೈಸೂರು ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಸಚಿವ ರಮೇಶ ಜಾರಕಿಹೊಳಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಜನವರಿ 27ರಂದು ರಾಹುಲ್ ಗಾಂಧಿ ಹೊಸಪೇಟೆಯಲ್ಲಿ ಪರಿಶಿಷ್ಟ ಪಂಗಡದ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದರು.
ಜನವರಿ 28ರಂದು ಚಿಕ್ಕಬಳ್ಳಾಪುರಕ್ಕೆ ಅವರು ಭೇಟಿ ನೀಡುತ್ತಿದ್ದು, ವಿದುರಾಶ್ವಥದಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಅಂದು ಮೈಸೂರಿಗೂ ಭೇಟಿ ನೀಡಿ ವಿದ್ಯಾರ್ಥಿಗಳು, ಚಿಂತಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಜನವರಿ 29ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದ್ದು ಅದರಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ. ಬಳಿಕ ಪಕ್ಷದ ನಾಯಕರ ಜೊತೆ ಚುನಾವಣಾ ಸಿದ್ಧತೆ ಕುರಿತು ಸಭೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿರುವ ಪ್ರಮುಖ ರಾಜ್ಯ ಕಾಂಗ್ರೆಸ್. ಈ ವರ್ಷ ಚುನಾವಣೆಯೂ ನಡೆಯಲಿದೆ. ಆದ್ದರಿಂದ, ರಾಹುಲ್ ಭೇಟಿ ಮಹತ್ವ ಪಡೆದುಕೊಂಡಿದೆ.












Click it and Unblock the Notifications