ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಂದೂಡಿಕೆ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 26 : ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಮುಂದೂಡಲಾಗಿದೆ. ನ.19ರಿಂದ ಮೂರು ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಬೇಕಿತ್ತು.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 29ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಆದ್ದರಿಂದ, ರಾಹುಲ್ ಗಾಂಧಿ ಅವರ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ನವೆಂಬರ್ 21ರ ಕುಮಟಾ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ

Rahul Gandhi Karnataka tour postponed

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದಿರಾ ಗಾಂಧಿ ಜನ್ಮದಿನವಾದ ನವೆಂಬರ್ 19ರಂದು ರಾಹುಲ್ ಗಾಂಧಿ ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕರ್ನಾಟಕ ಭೇಟಿಯನ್ನು ಮುಂದೂಡಲಾಗಿದೆ.

'ಕಾರ್ತಿಕ ಮಾಸ'ದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ರಥಯಾತ್ರೆಯ ಪೈಪೋಟಿ'

ನಿಗದಿಯಾಗಿದ್ದ ಕಾರ್ಯಕ್ರಮಗಳು

ಹಿಂದಿನ ವೇಳಾಪಟ್ಟಿ ಪ್ರಕಾರ ಮೂರು ದಿನಗಳ ಕಾಲ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಕೈಗೊಳ್ಳಬೇಕಿತ್ತು. ಚಿಕ್ಕಮಗಳೂರು, ಶಿವಮೊಗ್ಗ, ಕಾರವಾರಕ್ಕೆ ಭೇಟಿ ನೀಡಬೇಕಿತ್ತು.

* ನ.19 ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿ
* ನ.20 ಚಿಕ್ಕಮಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಭಾಷಣ, ಶಿವಮೊಗ್ಗದ ಸಮಾವೇಶದಲ್ಲಿ ಭಾಗಿ
* ನ.21 ಕುಮಟಾದಲ್ಲಿ ನಡೆಯುವ ಮೀನುಗಾರರ ಸಮಾವೇಶದಲ್ಲಿ ಭಾಗಿ ಕಾರ್ಯಕ್ರಮ ನಿಗದಿಯಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
AICC vice-president Rahul Gandhi's tour of Karnataka state has been postponed. Rahul Gandi Karnataka tour scheduled form November 19 to 21, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ