ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷಕ್ಕಾಗಿ ತ್ಯಾಗ ಮಾಡುವವರಿಗೆ ಚುನಾವಣಾ ಟಿಕೆಟ್: ರಾಹುಲ್ ಗಾಂಧಿ

By ಕಿರಣ್ ಸಿರ್ಸಿಕರ್
|
Google Oneindia Kannada News

ಮಂಗಳೂರು, ಮಾರ್ಚ್ 21: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಇಂದು ಮಂಗಳೂರಿನಲ್ಲಿ ಕರಾವಳಿ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ರಾಹುಲ್ ಗಾಂಧಿ ಅಲ್ಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ಮುಂಬರುವ ಚುನಾವಣೆಯ ರಣತಂತ್ರದ ಬಗ್ಗೆ ಚರ್ಚೆ ನಡೆಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸಭೆಯಲ್ಲಿ ದ.ಕ,ಉಡುಪಿ ಜಿಲ್ಲೆಯ ಒಟ್ಟು 13 ವಿದಾನ ಸಭಾ ಕ್ಷೇತ್ತ್ರದ 26 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು. ಅದಲ್ಲದೇ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಉಪಸ್ತಿತರಿದ್ದರು.

ಇಂದಿರಾ ಮರುಜನ್ಮ ಪಡೆದ ಕಾಫಿ ನಾಡಲ್ಲಿಂದು ರಾಹುಲ್ ಪ್ರವಾಸಇಂದಿರಾ ಮರುಜನ್ಮ ಪಡೆದ ಕಾಫಿ ನಾಡಲ್ಲಿಂದು ರಾಹುಲ್ ಪ್ರವಾಸ

ರಾಹುಲ್ ಗಾಂಧಿ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ನಾಯಕರ ಪ್ರತ್ಯೇಕ ಸಭೆ ನಡೆಸಿದ್ದು ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಿಗೆ ರಾಹುಲ್ ಗಾಂಧಿ ಅಭಯ ನೀಡಿದ್ದಾರೆ ಎಂದು ತಿಳಿಸಿದರು.

Rahul Gandhi meeting with DK and Udupi district congress leaders

ಯಾರು ಪಕ್ಷಕ್ಕಾಗಿ ತ್ಯಾಗ ಮಾಡ್ತಾರೋ ಅವರಿಗೆ ಟಿಕೆಟ್ ನೀಡುವುದಾಗಿ ರಾಹುಲ್ ಸ್ಪಷ್ಟ ಪಡಿಸಿದ್ದು ಟಿಕೆಟ್ ವಂಚಿತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಆದರೆ ಈ ಸಭೆಯಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Rahul Gandhi meeting with DK and Udupi district congress leaders

ಆದರೆ ಈ ಮೊದಲು ಸರ್ಕ್ಯೂಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ರಾಹುಲ್ ಗಾಂಧಿ ಸಭೆಗೆ ತೆರಳಲು ಕಾಂಗ್ರೆಸ್ ಮುಖಂಡರು ಹರಸಾಹಸ ಪಡಬೇಕಾಯಿತು. ಪಾಸ್ ಇಲ್ಲದವರನ್ನು ಒಳಗೆ ಬಿಡದ ಎಸ್.ಪಿ.ಜಿ ಸಿಬ್ಬಂದಿಯವರೊಂದಿಗೆ ಕಾಂಗ್ರೆಸ್ ಮುಖಂಡರು ವಾಗ್ವಾದ ನಡೆಸಿದರು.

English summary
As a part of janashirvada yatra Rahul Gandhi conducted meeting with Dakshin Kannada and Udupi congress leaders here in Mangaluru on march 21. 24 block congress leader attended the meeting to discuse about upcoming state assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X