ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ!

Recommended Video

      ವಿಮಾನ ನಿಲ್ದಾಣದಲ್ಲಿ ರಾಹುಲ್, ಸಿದ್ದರಾಮಯ್ಯ ರಹಸ್ಯ ಮಾತುಕತೆ! | Oneindia Kannada

      ಬೆಂಗಳೂರು, ಮಾರ್ಚ್ 18 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಬೆಂಗಳೂರಿನಿಂದ ದೆಹಲಿಗೆ ವಾಪಸ್ ಅಗುವಾಗ ಸಿದ್ದರಾಮಯ್ಯ ಜೊತೆ ಅವರು ನಡೆಸಿದ ರಹಸ್ಯ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ.

      ರಾಹುಲ್ ಗಾಂಧಿ ಅವರು ಸೋಮವಾರ ಕರ್ನಾಟಕದಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮೊದಲು ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಬಳಿಕ ಬೆಂಗಳೂರಿನಲ್ಲಿ ಟೆಕ್ಕಿಗಳ ಜೊತೆ ಸಂವಾದ ನಡೆಸಿದರು.

      ಬೆಂಗಳೂರಿನಿಂದ ದೆಹಲಿಗೆ ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಕೈ ಹಿಡಿದು ಕರೆದುಕೊಂಡು ಹೋದ ಅವರು 15 ನಿಮಿಷಕ್ಕೂ ಅಧಿಕ ಕಾಲ ಮಾತುಕತೆ ನಡೆಸಿದರು.

      ಚುನಾವಣಾ ಸಿದ್ಧತೆ, ಟೆಕ್ಕಿಗಳ ಜೊತೆ ಸಂವಾದ ನಡೆಸುವಾಗ ಆದ ಎಡವಟ್ಟು, ಜೆಡಿಎಸ್‌ ಜೊತೆಗಿನ ಮೈತ್ರಿಯ ಕುರಿತು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಭಯ ನಾಯಕರ ಮಾತುಕತೆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.....

      ರಾಹುಲ್ ಗಾಂಧಿ, ಸಿದ್ದರಾಮಯ್ಯ

      ರಾಹುಲ್ ಗಾಂಧಿ, ಸಿದ್ದರಾಮಯ್ಯ

      ಬೆಂಗಳೂರಿನಿಂದ ದೆಹಲಿಗೆ ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ರಾಹುಲ್ ಗಾಂಧಿ ಕೆಲವು ಕಾಲ ಮಾತುಕತೆ ನಡೆಸಿದರು. ಉಭಯ ನಾಯಕರ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಆದರೆ, ಸಿದ್ದರಾಮಯ್ಯ ಬಳಿ ಮಾತ್ರ ಮಾತುಕತೆ ನಡೆಸಿದ್ದಾರೆ.

      ರಾಹುಲ್ ಗಾಂಧಿಗೆ ಇರುಸುಮುರುಸು

      ರಾಹುಲ್ ಗಾಂಧಿಗೆ ಇರುಸುಮುರುಸು

      ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಟೆಕ್ಕಿಗಳ ಜೊತೆ ಮಾತುಕತೆ ನಡೆಸುವಾಗ ರಾಹುಲ್ ಗಾಂಧಿ ಅವರಿಗೆ ಇರಸುಮುರುಸು ಉಂಟಾಯಿತು. ಕಾರ್ಯಕ್ರಮಕ್ಕೆ ಅವರು ಬರುವಾಗ ಮೋದಿ ಪರ ಘೋಷಣೆಗಳನ್ನು ಅನೇಕರು ಕೂಗಿದರು. ಈ ವಿಚಾರದ ಬಗ್ಗೆಯೂ ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ.

      ಲೋಕಸಭಾ ಚುನಾವಣೆ ಮೈತ್ರಿ ವಿಚಾರ

      ಲೋಕಸಭಾ ಚುನಾವಣೆ ಮೈತ್ರಿ ವಿಚಾರ

      ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಬಗ್ಗೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 8 ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿವೆ.

      ಚುನಾವಣಾ ಸಿದ್ಧತೆ

      ಚುನಾವಣಾ ಸಿದ್ಧತೆ

      ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ಪ್ರಚಾರ, ಚುನಾವಣಾ ಸಿದ್ಧತೆಗಳ ಕುರಿತು ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+