ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎನ್ನುವುದು ಅಸಂಬದ್ಧ: ಸಿ.ಎಂ ಸಿದ್ದರಾಮಯ್ಯ!
ದೇಶದಲ್ಲಿ ವೋಟ್ ಚೋರಿ ವಿಚಾರವು ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಕೇಂದ್ರ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿ ಮಾಡಿದ್ದು. ಇದರಲ್ಲಿ ಹಲವು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿ ಮಾಡಿದ ಬೆನ್ನಲ್ಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ Rahul Gandhi ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ.
5 ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ ಒಂದು ನಕಲಿ ಮತ ಎನ್ನುವುದು ಸ್ಪಷ್ಟ.
ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರು ಉತ್ತರ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ "ತನ್ನ ಮಾಲೀಕರ" ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications