"ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ... ಹುಷಾರ್"

ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎನ್ನುವ ಬೆದರಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು Bharatiya Janata Party (BJP) ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ Narendra Modi ಮತ್ತು ಗೃಹ ಸಚಿವ Amit Shah ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ ನಿಂತು ತಮ್ಮ ವಿರೋಧಿಗಳ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Rahul Gandhi s Security Tightened Following Reported Threat

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ, ಇಬ್ಬರಾ, ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲಾ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ ಎಂದಿದ್ದಾರೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ Rahul Gandhi ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+