ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಟ್ವಿಟರ್ ಖಾತೆ ಬಂದ್: ಯುವ ಕಾಂಗ್ರೆಸ್‌ನಿಂದ ಉಗ್ರ ಪ್ರತಿಭಟನೆ!

|
Google Oneindia Kannada News

ಬೆಂಗಳೂರು, ಆ. 09: ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆಯನ್ನು ಸ್ಥಗಿತೊಳಿಸಿದ್ದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ. ಖಾತೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಟ್ವಿಟರ್ ಕಚೇರಿ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಬೆನ್ನಿಗಾನ ಹಳ್ಳಿಯ ಟ್ವಿಟರ್ ಇಂಡಿಯಾ ಕಚೇರಿ ಮುಂದೆ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆ ಸಂಸ್ಥೆಯ ಧೋರಣೆಯನ್ನು ಖಂಡಿಸಿದರು. ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಕೂಡಲೇ ಪುನರ್ ಸ್ಥಾಪಿಸದಿದ್ದರೆ ಟ್ವಿಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

"ಅತ್ಯಾಚಾರಿಗಳನ್ನು ಟ್ವಿಟರ್ ಯಾಕೆ ರಕ್ಷಿಸುತ್ತಿದೆ?", "ಕೂಡಲೇ ರಾಹುಲ್ ಗಾಂಧಿ ಅವರು ಟ್ವಿಟರ್ ಖಾತೆ ಪುನರ್ ಸ್ಥಾಪಿಸಿ" ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

Rahul Gandhis Twitter account suspended issue: Karnataka Youth Congress protest in front Twitter office

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, "ದೆಹಲಿ ಕಂಟೋನ್ಮೆಂಟ್‌ನಲ್ಲಿ 9 ವರ್ಷದ ಬಾಲಕಿಯ ಮೇಲಿನ ಹೀನ ಅತ್ಯಾಚಾರ ಪ್ರಕರಣದ ಸಂಸತ್ರಸ್ಥರಿಗೆ ಸಾಂತ್ವಾನ ಹೇಳುವ ಚಿತ್ರವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದರು. ಇದೇ ಕಾರಣ ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿರುವುದು ಖಂಡನೀಯ. ಮುಂದಿನ 24 ಗಂಟೆಗಳಲ್ಲಿ ಟ್ವಿಟರ್ ಖಾತೆ ಪುನಃ ಚಾಲನೆಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು. ಟ್ವಿಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕುತ್ತೇವೆ" ಎಂದು ಎಚ್ಚರಿಕೆ ನೀಡಿದರು.

Rahul Gandhis Twitter account suspended issue: Karnataka Youth Congress protest in front Twitter office

"ಎರಡು ದಿನಗಳಿಂದ ಟ್ವಿಟರ್ ಖಾತೆ ಸ್ಥಗಿತಗೊಳಿಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವ ಧೋರಣೆ ಖಂಡನೀಯ. ಇಂದು ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ಟ್ವಿಟರ್ ತನ್ನ ಧೋರಣೆಯನ್ನು ಇದೇ ರೀತಿ ಮುಂದುವರೆಸಿದರೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಟ್ವಿಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು" ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದರು.

Rahul Gandhis Twitter account suspended issue: Karnataka Youth Congress protest in front Twitter office

Recommended Video

Siddaramaiah ಮೇಲೆ ಆಕ್ರೋಶ ಹೊರ ಹಾಕಿದ ಈಶ್ವರಪ್ಪ | Oneindia Kannada

"ಈ ಬಗ್ಗೆ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು, ಅಧ್ಯಕ್ಷರು, ಆಡಳಿತ ಮಂಡಳಿಯವರು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಟ್ವಿಟರ್‌ನ್ನು ಯಾವುದೇ ಕಾರಣಕ್ಕೂ ಕೇಸರೀಕರಣ ಮಾಡಬಾರದು. ಟ್ವಿಟರ್ ಕೇವಲ ಬಿಜೆಪಿಯವರಿಗೆ ಸೇರಿದ ಆಸ್ತಿ ಅಲ್ಲ, ಅದು ಎಲ್ಲರಿಗೂ ಸೇರಿದ್ದು, ಅತ್ಯಾಚಾರಿಗಳನ್ನು ಬೆಂಬಲಿಸುವ ಟ್ವಿಟರ್ ಧೋರಣೆ ಸರಿಯಲ್ಲ" ಎಂದು ಎಂ.ಎಸ್. ರಕ್ಷಾ ರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.

ರಾಹುಲ್ ಗಾಂಧಿ ಟ್ವಿಟರ್ ಖಾತೆ ಸ್ಥಗಿತಗೊಳಿಸಿದ್ದು ಯಾವಾಗ? ಯಾಕೆ?:

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ ಖಾತೆಯನ್ನು ಎರಡು ದಿನಗಳ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದ ಫೋಟೋ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣ ಟ್ವಿಟರ್ ತೆಗೆದುಹಾಕಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಟ್ವೀಟ್ ಖಾತೆ ಅಮಾತುಗೊಂಡಿತ್ತು. ಟ್ವಿಟರ್ ಖಾತೆ ಸಸ್ಪೆಂಡ್ ಆದರೂ ರಾಹುಲ್ ಗಾಂಧಿ ಮಾಡಿರುವ ಹಳೆಯ ಟ್ವೀಟ್ ಅಥವಾ ಸಂಪೂರ್ಣ ಖಾತೆಯನ್ನು ಇತರರು ನೋಡಬಹುದಾಗಿದೆ. ಟ್ವಿಟರ್ ಖಾತೆ ಸಸ್ಪೆಂಡ್ ಎಂದರೆ, ಅದು ಆ ವ್ಯಕ್ತಿಗೆ ಲಭ್ಯವಿರುವುದಿಲ್ಲ. ಮತ್ತು ಅಕೌಂಟ್ ಅಕ್ಸೆಸ್ ಮಾಡಲು ಹೊರಟರೆ, ಖಾತೆ ಸಸ್ಪೆಂಡ್ ಆಗಿದೆ ಎಂಬ ಸಂದೇಶ ಬರುತ್ತದೆ.

ವಾರದ ಮೊದಲು ರಾಹುಲ್ ಗಾಂಧಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಬಾಲಕಿಯ ಸಂಬಂಧಿಕರನ್ನು, ಕುಟುಂಬದವರನ್ನು ಭೇಟಿಯಾಗಿದ್ದರು. ಅವರ ಜೊತೆಗೆ ತೆಗೆಸಿಕೊಂಡಿದ್ದ ಫೋಟೊವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಬಳಿಕ, ಆ ಪೋಸ್ಟ್ ಟ್ವಿಟರ್​​ನ ನೀತಿ- ನಿಯಮಗಳನ್ನು ಉಲ್ಲಂಘಿಸಿದೆ ಎಂದು ತಿಳಿದುಬಂದಿತ್ತು. ಹೀಗಾಗಿ ರಾಹುಲ್ ಗಾಂಧಿ ಟ್ವಿಟರ್ ಖಾತೆ ಸಸ್ಪೆಂಡ್ ಆಗಿದೆ. ಅದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

English summary
Rahul Gandhi's Twitter account suspended issue: Karnataka Youth Congress activists protested in front of Bengaluru's Twitter office .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X