ಏ.5ರಂದು ಕರ್ನಾಟಕದಲ್ಲಿ ರಾಹುಲ್ ಪ್ರಚಾರ

ಬೆಂಗಳೂರು, ಮಾ.29 : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರದತ್ತ ಗಮನಹರಿಸಿದೆ. ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತೀಕಟ್ಟಿ ಹೇಳಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೀರಣ್ಣ ಮತ್ತೀಕಟ್ಟಿ ಏಪ್ರಿಲ್ 5ರಂದು ರಾಹುಲ್ ಗಾಂಧಿ ಮಂಗಳೂರು ಮತ್ತು ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು. ಸೋನಿಯಾ ಗಾಂಧಿ ಅವರು ಏ.8ರಿಂದ 13ರೊಳಗೆ ಒಂದು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.

Rahul Gandhi

ಕೆಪಿಸಿಸಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾಜ್ಯದಲ್ಲಿ ಪ್ರಚಾರ ನಡೆಸಲು ಕಳುಹಿಸಿಕೊಡಬೇಕೆಂದು ಹೈಕಮಾಂಡ್‌ ನಾಯಕರಿಗೆ ಮನವಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷರು ಕೇಂದ್ರ ಪ್ರಚಾರ ಸಮಿತಿಯೊಂದಿಗೆ ಈ ಕುರಿತು ಮಾತುಕತೆ ನಡೆಸುತ್ತಿದ್ದು, ಶೀಘ್ರವೇ ಪ್ರಧಾನಿ ರಾಜ್ಯದಲ್ಲಿ ಪ್ರಚಾರ ನಡೆಸುವ ದಿನಾಂಕ ನಿಗದಿಯಾಗಲಿದೆ ಎಂದು ತಿಳಿಸಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]

ಸ್ಟಾರ್ ಪ್ರಚಾರಕ ಪಟ್ಟಿಯನ್ನು ಪಕ್ಷ ಸಿದ್ಧಪಡಿಸಿ ಚುನಾವಣಾ ಆಯೋಗಕ್ಕೆ ನೀಡಿದೆ. ಕ್ಷೇತ್ರದ ಅಭ್ಯರ್ಥಿಗಳ ಸಲಹೆಯಂತೆ ಸ್ಟಾರ್ ಪ್ರಚಾರಕರನ್ನು ಆ ಕ್ಷೇತ್ರಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈಗಾಗಲೇ ರಾಜ್ಯದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಅವರು ಪ್ರಚಾರ ನಡೆಸಲಿದ್ದಾರೆ ಎಂದರು. [ಕಾಂಗ್ರೆಸ್ ಸ್ಟಾರ್ ಪ್ರಚಾರಕರು]

ಎಸ್.ಎಂ.ಕೃಷ್ಣ ಪ್ರಚಾರ : ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಏ.2ರಿಂದ 13ರ ವರೆಗೆ ಎಲ್ಲಾ 28 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು. ಬೆಂಗಳೂರಿನಲ್ಲಿ 3 ದಿನ ಹಾಗೂ ಮಂಡ್ಯದಲ್ಲಿ 2 ದಿನ ಕೃಷ್ಣ ಮತ ಯಾಚಿಸಲಿದ್ದು, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಳೇ ಮೈಸೂರು ಭಾಗದ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು ಎಂದು ಮಾಹಿತಿ ನೀಡಿದರು. [ಚುನಾವಣಾ ಪ್ರಚಾರಕ್ಕಿಳಿದ ಎಸ್ಎಂ ಕೃಷ್ಣ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+