ಡಿ 23ಕ್ಕೆ ರಾಜ್ಯಕ್ಕೆ ರಾಹುಲ್ ಆಗಮನ, ಚುನಾವಣೆ ಪ್ರಚಾರ ಶುರು

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 07: ರಾಜಕೀಯವಾಗಿ ಮಾಜಿ ಪ್ರಧಾನಿ, ದಿವಂಗತ ಇಂದಿರಾಗಾಂಧಿ ಅವರಿಗೆ ಮರುಜನ್ಮ ನೀಡಿದ ಕ್ಷೇತ್ರವಾದ ಚಿಕ್ಕಮಗಳೂರಿನಿಂದ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸುವ ಮುನ್ಸೂಚನೆ ಸಿಕ್ಕಿದೆ.

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಮುಂದಿನ ಅಸೆಂಬ್ಲಿ ಚುನಾವಣೆಗೆ ರಹಕಹಳೆ ಊದಲಿದ್ದಾರೆ.

ಡಿಸೆಂಬರ್ 23 ರಂದು ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಚಿಕ್ಕಮಗಳೂರಿಗೆ ಆಗಮಿಸಿ, ಇಂದಿರಾಗಾಂಧಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಭರ್ಜರಿಯಾಗಿ ಸ್ವಾಗತಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನಿರ್ಧರಿಸಿದ್ದು, ಭರ್ಜರಿ ತಯಾರಿ ನಡೆಸಿದೆ.

ಎಐಸಿಸಿ ಅಧ್ಯಕ್ಷರಾಗಿ ಡಿಸೆಂಬರ್ 16ರಂದು ರಾಹುಲ್ ಗಾಂಧಿ ಅವರನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ. ಅಧ್ಯಕ್ಷರಾದ ಬಳಿಕ ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿರುವುದು ಮಹತ್ವ ಪಡೆದುಕೊಂಡಿದೆ.

ಡಿ 23ಕ್ಕೆ ರಾಜ್ಯ ರಾಹುಲ್ ಆಗಮನ, ಚುನಾವಣೆ ಪ್ರಚಾರ ಶುರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rahul Gandhi who is set to become AICC president is scheduled to visit Chikkamagaluru on December 23 to attend Former PM Indira Gandhi's Birth centenary event. He will also kick start Karnataka Congress Election campaign in the state.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ